(ಪ್ರಾತಿನಿಧಿಕ ಚಿತ್ರ)
ಅಲಪ್ಪುಳ: ಕೇರಳದ ಅಲ್ಲಪುಳದಲ್ಲಿ ಅನಾರೋಗ್ಯದಿಂದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಕಾಲರಾದಿಂದ ಸಾವು ಸಂಭವಿಸಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ವೈದ್ಯಕೀಯ ವರದಿಗಾಗಿ ಕಾಯುತ್ತಿದ್ದೇವೆ ಎಂದು ಕೇರಳ ಆರೋಗ್ಯ ಇಲಾಖೆ ಶುಕ್ರವಾರ ಹೇಳಿದೆ.
ರಘು (48) ಮೃತ ವ್ಯಕ್ತಿ. ಅತಿಸಾರ, ವಾಂತಿ, ಸುಸ್ತು ಮತ್ತು ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಇವರನ್ನು ಮೇ 9ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಶುಕ್ರವಾರ ರಘು ಮೃತಪಟ್ಟಿದ್ದಾರೆ.
ನೀರಿನಿಂದ ಹರಡುವ ಕಾಲರಾ ಸೋಂಕು ಇವರಲ್ಲಿತ್ತೇ ಎಂಬುದನ್ನ ಪತ್ತೆ ಮಾಡಲು ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಮೃತ ವ್ಯಕ್ತಿಯ ಮಲದ ಮಾದರಿಯಲ್ಲಿ ಕಾಲರಾ ಹರಡುವ ಬ್ಯಾಕ್ಟೀರಿಯಾ ಪತ್ತೆಯಾದಲ್ಲಿ ಖಚಿತಪಡಿಸಲಾಗುವುದು ಎಂದು ವೈದ್ಯಾಧಿಕಾರಿ ಮಾಹಿತಿ ನೀಡಿದ್ದಾರೆ.
ಆರೋಗ್ಯ ಇಲಾಖೆಯು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಮೃತ ವ್ಯಕ್ತಿಯ ಮನೆಯ ಸುತ್ತಮುತ್ತಲಿನಲ್ಲಿ ತಪಾಸಣೆ ಕೈಗೊಂಡಿದೆ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.