ADVERTISEMENT

ಹೆಲಿಕಾಪ್ಟರ್ ಅಪಘಾತ: ರಾವತ್ ಸೇರಿ ಮೂವರ ಗುರುತು ಪತ್ತೆ

ಮೃತದೇಹ ಸುಟ್ಟು ಕರಕಲು; ಪತ್ತೆಯಾಗದ ಉಳಿದವರ ಗುರುತು

​ಪ್ರಜಾವಾಣಿ ವಾರ್ತೆ
Published 9 ಡಿಸೆಂಬರ್ 2021, 19:39 IST
Last Updated 9 ಡಿಸೆಂಬರ್ 2021, 19:39 IST
ಬಿಪಿನ್ ರಾವತ್
ಬಿಪಿನ್ ರಾವತ್   

ನವದೆಹಲಿ: ಎಂಐ 17ವಿ5 ಹೆಲಿಕಾಪ್ಟರ್ ಅಪಘಾತದಲ್ಲಿ ಮೃತಪಟ್ಟ ಮೂರು ಸೇನಾ ಪಡೆಗಳ ಮುಖ್ಯಸ್ಥ (ಸಿಡಿಎಸ್) ಬಿಪಿನ್ ರಾವತ್ ಸೇರಿದಂತೆ ಮೂವರ ಗುರುತನ್ನು ಪತ್ತೆ ಮಾಡಲಷ್ಟೇ ಸಾಧ್ಯವಾಗಿದೆ. ಉಳಿದವರ ಮೃತದೇಹಗಳು ಬೆಂಕಿಯಲ್ಲಿ ಸುಟ್ಟು ಕರಕಲಾಗಿರುವುದರಿಂದ ಗುರುತಿಸಲು ಸಾಧ್ಯವಾಗಿಲ್ಲ.

ರಾವತ್, ಅವರ ಪತ್ನಿ ಮಧುಲಿಕಾ ಮತ್ತು ಬ್ರಿಗೇಡಿಯರ್ ಎಲ್‌.ಎಸ್‌. ಲಿದ್ದರ್ ಅವರ ಗುರುತು ಪತ್ತೆಹಚ್ಚಲಾಗಿದ್ದು, ಈ ಮೂವರ ಮೃತದೇಹಗಳನ್ನು ಅಂತ್ಯಕ್ರಿಯೆಗಾಗಿ ಸಂಬಂಧಿಕರಿಗೆ ಹಸ್ತಾಂತರ ಮಾಡಲಾಗುತ್ತದೆ. ಉಳಿ ದವರ ಮೃತದೇಹಗಳನ್ನು ದೆಹಲಿಯ ಸೇನಾನೆಲೆ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಿ, ಗುರುತು ಪತ್ತೆಯಾದ ಬಳಿಕ ಸಂಬಂಧಿಕರಿಗೆ ನೀಡಲಾಗುವುದು.

ಉಳಿದವರ ಗುರುತು ಪತ್ತೆ ಹಚ್ಚಲು ಡಿಎನ್‌ಎ ಪರೀಕ್ಷೆ ಹಾಗೂ ಹತ್ತಿರದ ಸಂಬಂಧಿಕರಿಂದ ಪಡೆದ ರಕ್ತದ ಮಾದರಿ ಜೊತೆ ಹೋಲಿಸಲಾಗುತ್ತದೆ. ಹೀಗಾಗಿ ಮೃತರ ಸಂಬಂಧಿಕರನ್ನು ದೆಹಲಿಗೆ ಕರೆಸಿಕೊಳ್ಳಲಾಗುತ್ತಿದೆ. ವೈಜ್ಞಾನಿಕ ವಿಧಾನದಲ್ಲಿ ಗುರುತು ಪತ್ತೆಗೆ ಸಂಬಂಧಿಕರ ನೆರವು ಪಡೆದುಕೊಳ್ಳಲು ನಿರ್ಧರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.