ADVERTISEMENT

ಅಗಸ್ಟಾ ವೆಸ್ಟ್‌ಲ್ಯಾಂಡ್‌: ಮಧ್ಯವರ್ತಿ ಸಕ್ಸೇನಾಗೆ ಮಧ್ಯಂತರ ಜಾಮೀನು

ಪಿಟಿಐ
Published 23 ಅಕ್ಟೋಬರ್ 2020, 11:12 IST
Last Updated 23 ಅಕ್ಟೋಬರ್ 2020, 11:12 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ಅಗಸ್ಟಾ ವೆಸ್ಟ್‌ಲ್ಯಾಂಡ್‌ ಹೆಲಿಕಾಪ್ಟರ್‌ ಖರೀದಿ ಹಗರಣದಲ್ಲಿ ಮಧ್ಯವರ್ತಿಯಾಗಿದ್ದ ಆರೋಪ ಎದುರಿಸುತ್ತಿರುವ ದುಬೈ ಮೂಲದ ಉದ್ಯಮಿ ರಾಜೀವ್‌ ಸಕ್ಸೇನಾ ಅವರಿಗೆ ದೆಹಲಿ ಕೋರ್ಟ್‌ ಶುಕ್ರವಾರ ಮಧ್ಯಂತರ ಜಾಮೀನು ನೀಡಿದೆ.

₹ 2 ಲಕ್ಷ ಮೊತ್ತದ ವೈಯಕ್ತಿಕ ಬಾಂಡ್‌, ಅಷ್ಟೇ ಮೊತ್ತದ ಭದ್ರತೆ ಆಧಾರದ ಮೇಲೆ ವಿಶೇಷ ನ್ಯಾಯಾಧೀಶ ಅರವಿಂದ ಕುಮಾರ್‌ ಡಿಸೆಂಬರ್‌ 11 ವರೆಗೆ ಮಧ್ಯಂತರ ಜಾಮೀನು ನೀಡಿದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸಿಬಿಐ, ತನ್ನ ಆಕ್ಷೇಪಣೆಗೆ ಸಂಬಂಧಿಸಿ ಪ್ರತಿಕ್ರಿಯೆ ಸಲ್ಲಿಸಲು ಸಮಯಾವಕಾಶ ಕೇಳಿತು. ಇದೇ ಹಗರಣದಲ್ಲಿ ಮಧ್ಯವರ್ತಿಯಾಗಿದ್ದ ಆರೋಪ ಎದುರಿಸುತ್ತಿರುವ ಸಂದೀಪ್‌ ತ್ಯಾಗಿ ಅವರಿಗೂ ಕೋರ್ಟ್‌ ಜಾಮೀನು ನೀಡಿತು.

ADVERTISEMENT

ಗಣ್ಯರ ಪ್ರವಾಸಕ್ಕಾಗಿ ಹೆಲಿಕಾಪ್ಟರ್‌ ಖರೀದಿಸಿದ ವೇಳೆ ₹ 3,600 ಕೋಟಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.