ADVERTISEMENT

ನ್ಯೂಜಿಲೆಂಡ್ ನೂತನ ಪ್ರಧಾನಿಯಾಗಿ ಕ್ರಿಸ್‌ ಹಿಪ್ಕಿನ್ಸ್ ಆಯ್ಕೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 21 ಜನವರಿ 2023, 18:39 IST
Last Updated 21 ಜನವರಿ 2023, 18:39 IST
ಕ್ರಿಸ್ ಹಿಪ್ಪಿನ್ಸ್‌ (ಎಪಿ ಚಿತ್ರ)
ಕ್ರಿಸ್ ಹಿಪ್ಪಿನ್ಸ್‌ (ಎಪಿ ಚಿತ್ರ)   

ವೆಲ್ಲಿಂಗ್ಟನ್: ನ್ಯೂಜಿಲೆಂಡ್ ನೂತನ ಪ್ರಧಾನಿ ಅಭ್ಯರ್ಥಿಯಾಗಿ ಕ್ರಿಸ್ ಹಿಪ್ಕಿನ್ಸ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಆಡಳಿತಾರೂಢ ಲೇಬರ್‌ ಪಕ್ಷದ ಮೂಲಗಳು ತಿಳಿಸಿವೆ.

44 ವರ್ಷದ ಕ್ರಿಸ್ ಹಿಪ್ಕಿನ್ಸ್ ಅವರು ಪ್ರಸ್ತುತ ಶಿಕ್ಷಣ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕ್ರಿಸ್‌ ಅವರ ಆಯ್ಕೆಗೆ ಸಂಸತ್‌ನಲ್ಲಿ ಅನುಮೋದನೆ ದೊರೆಯಬೇಕಿದೆ. ನಂತರ, ಅವರು ದೇಶದ 41ನೇ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸುವರು ಎಂದು ಮೂಲಗಳು ತಿಳಿಸಿವೆ.

ಜಸಿಂಡ ಆರ್ಡರ್ನ್ ಅವರು ಪ್ರಧಾನಿ ಸ್ಥಾನಕ್ಕೆ ದಿಢೀರ್ ರಾಜೀನಾಮೆ ಘೋಷಿಸಿದ ಬಳಿಕ, ಲೇಬರ್‌ ಪಕ್ಷ ಹಿಪ್ಕಿನ್ಸ್ ಅವರನ್ನು ಆಯ್ಕೆ ಮಾಡಿದೆ. ಅಕ್ಟೋಬರ್‌ನಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.