ADVERTISEMENT

ಭೂ ವ್ಯಾಜ್ಯ ಪ್ರಕರಣ: ಕೋಲ್ಕತ್ತ ಹೈಕೋರ್ಟ್‌ ನ್ಯಾಯಮೂರ್ತಿಯ ಪತಿಗೆ CID ನೋಟಿಸ್

ಪಿಟಿಐ
Published 18 ಡಿಸೆಂಬರ್ 2023, 2:24 IST
Last Updated 18 ಡಿಸೆಂಬರ್ 2023, 2:24 IST
<div class="paragraphs"><p>ಕೋಲ್ಕತ್ತ ಹೈಕೋರ್ಟ್‌</p></div>

ಕೋಲ್ಕತ್ತ ಹೈಕೋರ್ಟ್‌

   

– ಪಿಟಿಐ ಚಿತ್ರ

ಕೋಲ್ಕತ್ತ: ಭೂ ವಾಜ್ಯ ಪ್ರಕರಣದಲ್ಲಿ ಪ್ರಭಾವ ಬೀರಿದ ಆರೋಪದಲ್ಲಿ ಕೋಲ್ಕತ್ತ ಹೈಕೋರ್ಟ್‌ನ ನ್ಯಾಯಾಧೀಶೆ ಅಮೃತ ಸಿನ್ಹಾ ಅವರ ಪತಿ ಪ್ರತಾಪ್ ಚಂದ್ರ ಡೆ ಅವರಿಗೆ ಕೋಲ್ಕತ್ತ ಸಿಐಡಿ ನೋಟಿಸ್‌ ಜಾರಿ ಮಾಡಿದೆ.

ADVERTISEMENT

ಇಲ್ಲಿರುವ ಸಿಬಿಐ ಮುಖ್ಯ ಕಚೇರಿ ‘ಭವಾನಿ ಭವನ‘ಕ್ಕೆ ಶುಕ್ರವಾರದಂದು ವಿಚಾರಣೆಗೆ ಹಾಜರಾಗಬೇಕು ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.

‘ಸೋಮವಾರದಂದು ಮೊಬೈಲ್ ವಶಕ್ಕೆ ಒಪ್ಪಿಸಬೇಕು ಎಂದು ಡೆ ಅವರಿಗೆ ಸೂಚಿಸಲಾಗಿದೆ. ಡಿ.22ರಂದು ವಿಚಾರಣೆಗೆ ಹಾಜರಾಗಲು ನಿರ್ದೇಶಿಸಲಾಗಿದೆ’ ಎಂದು ಸಿಐಡಿ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

ಡೆ ಅವರ ವಿರುದ್ಧ ಭಾರತೀಯ ದಂಡ ಸಂಹಿತೆಯ ವಿವಿಧ ಕಲಂಗಳ ಅಡಿಯಲ್ಲಿ ಎರಡು ಎಫ್‌ಐಆರ್ ದಾಖಲಿಸಿರುವುದಾಗಿ ಸಿಐಡಿ ಅಧಿಕಾರಿಗಳು ತಿಳಿಸಿದ್ದಾರೆ. ಡಿ. 1 ಹಾಗೂ 16ರಂದು ಈಗಾಗಲೇ ಡೆ ಅವರನ್ನು ಸಿಐಡಿ ವಿಚಾರಣೆ ನಡೆಸಿದೆ.

ವೃತ್ತಿಯಲ್ಲಿ ವಕೀಲರಾಗಿರುವ ಡೆ ಅವರು, ತಮ್ಮ ಪ್ರಭಾವ ಬಳಸಿ ಭೂ ವ್ಯಾಜ್ಯ ಪ್ರಕರಣಗಳಲ್ಲಿ ಒತ್ತಡ ಸೃಷ್ಠಿ ಮಾಡುತ್ತಿದ್ದಾರೆ ಎಂದು ಇತ್ತೀಚೆಗೆ ಸುಪ್ರೀಂ ಕೋರ್ಟ್ ಕೂಡ ಹೇಳಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.