ADVERTISEMENT

ಸೂರತ್: ಗುಂಡು ಹಾರಿಸಿಕೊಂಡು CISF ಯೋಧ ಆತ್ಮಹತ್ಯೆ

ಪಿಟಿಐ
Published 4 ಜನವರಿ 2025, 12:27 IST
Last Updated 4 ಜನವರಿ 2025, 12:27 IST
<div class="paragraphs"><p>&nbsp;ಪ್ರಾತಿನಿಧಿಕ ಚಿತ್ರ</p></div>

 ಪ್ರಾತಿನಿಧಿಕ ಚಿತ್ರ

   

ಸೂರತ್: ಸೂರತ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಗೆ (ಸಿಐಎಸ್ಎಫ್) ಸೇರಿದ ಯೋಧರೊಬ್ಬರು ತನ್ನ ಸರ್ವೀಸ್ ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಸಿಐಎಸ್ಎಫ್ ಸಿಬ್ಬಂದಿ ಕಿಸಾನ್ ಸಿಂಗ್ (32) ಆತ್ಮಹತ್ಯೆಗೆ ಶರಣಾದವರು.

ADVERTISEMENT

ಇಂದು ಮಧ್ಯಾಹ್ನ 2.10ರ ಸುಮಾರಿಗೆ ವಿಮಾನ ನಿಲ್ದಾಣದ ವಾಶ್‌ರೂಮ್‌ನಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ಹೇಳಿದ್ದಾರೆ.

ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಅಲ್ಲಿನ ವೈದ್ಯರು ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದೂ ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.