ಹೈದರಾಬಾದ್ ವಿಮಾನ ನಿಲ್ದಾಣದಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ ಎಲೆಕ್ಟ್ರಾನಿಕ್ ವಸ್ತುಗಳನ್ನು ಸಿಐಎಸ್‌ಎಫ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ
ಚಿತ್ರ ಕೃಪೆ: CISFHQrs
ಹೈದರಾಬಾದ್: ಇಲ್ಲಿಯ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಕಳ್ಳಸಾಗಣೆ ಮಾಡುತ್ತಿದ್ದ ಡ್ರೋನ್, ಮೊಬೈಲ್ ಸೇರಿದಂತೆ ₹1.4 ಕೋಟಿ ಮೌಲ್ಯದ ಎಲೆಕ್ಟ್ರಾನಿಕ್ ವಸ್ತುಗಳನ್ನು ಸಿಐಎಸ್‌ಎಫ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಅಬುಧಾಬಿಯಿಂದ ಬಂದಿದ್ದ ಇಬ್ಬರು ಪ್ರಯಾಣಿಕರು ವಿಮಾನ ನಿಲ್ದಾಣದಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದರು. ಅವರ ಬ್ಯಾಗ್‌ಗಳನ್ನು ಪರಿಶೀಲನೆ ನಡೆಸಿದಾಗ ಭಾರಿ ಪ್ರಮಾಣದ ಎಲೆಕ್ಟ್ರಾನಿಕ್ ವಸ್ತುಗಳು ಇರುವುದು ಪತ್ತೆಯಾಗಿದೆ. ನಿಷೇಧಿತ ಡ್ರೋನ್‌ಗಳು, ಸ್ಮಾರ್ಟ್‌ಫೋನ್‌ಗಳು, ಲ್ಯಾಪ್‌ಟಾಪ್ ಸೇರಿ ₹1.4 ಕೋಟಿ ಮೌಲ್ಯದ ವಸ್ತುಗಳು ಸಿಕ್ಕಿವೆ.
ತನಿಖೆ ವೇಳೆ ಪ್ರಯಾಣಿಕರು ತಮ್ಮ ವಸ್ತುಗಳಿಗೆ ದಾಖಲೆಗಳನ್ನು ನೀಡಲು ವಿಫಲಾಗಿದ್ದಾರೆ. ಇಬ್ಬರನ್ನೂ ವಶಕ್ಕೆ ಪಡೆದು ಕಸ್ಟಮ್ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗಿದೆ ಎಂದು ಸಿಐಎಸ್‌ಎಫ್ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಮಾಹಿತಿ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.