ADVERTISEMENT

ವಿಮಾನ ನಿಲ್ದಾಣದಲ್ಲಿ ಹಣೆಗೆ ಗುಂಡು ಹೊಡೆದುಕೊಂಡು CISF ಸಬ್ ಇನ್‌ಸ್ಪೆಕ್ಟರ್ ಸಾವು

ಪಿಟಿಐ
Published 23 ಜುಲೈ 2022, 7:26 IST
Last Updated 23 ಜುಲೈ 2022, 7:26 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಕೊಲ್ಕತ್ತ: ಕೇಂದ್ರಿಯ ಕೈಗಾರಿಕಾ ಭದ್ರತಾ ಪಡೆಯ ಸಿಬ್ಬಂದಿಯೊಬ್ಬರು ಕೊಲ್ಕತ್ತ ನೇತಾಜಿ ಸುಭಾಸ್ ಚಂದ್ರ ಬೋಸ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕರ್ತವ್ಯದ ವೇಳೆಯೇ ಹಣೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತನನ್ನು ಸಿಐಎಸ್‌ಎಫ್‌ ಸಬ್ ಇನ್‌ಸ್ಪೆಕ್ಟರ್ ಪಂಕಜ್ ಕುಮಾರ್ ಎಂದು (35) ಗುರುತಿಸಲಾಗಿದೆ.

ವಿಮಾನ ನಿಲ್ದಾಣದ ಬೇಸ್‌ಮೆಂಟ್‌ನ ಶೌಚಾಲಯದ ಮುಂದೆ ಶನಿವಾರ ಬೆಳಿಗ್ಗೆ 7.45 ರ ಸುಮಾರು ಪಂಕಜ್ ಕುಮಾರ್ ಹಣೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ವೇಳೆ ಶೌಚಾಲಯವೆಲ್ಲ ರಕ್ತದಿಂದ ತುಂಬಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ವಿಮಾನ ನಿಲ್ದಾಣದ ಒಳಗೆ ಇಂತಹ ಘಟನೆ ನಡೆದರೂ ಪ್ರಯಾಣಿಕರಿಂದ ದೂರ ಘಟನೆ ಸಂಭವಿಸಿರುವುದರಿಂದ ವಿಮಾನಗಳ ಓಡಾಟಕ್ಕೆ ಯಾವುದೇ ಅಡಚಣೆಯುಂಟಾಗಿಲ್ಲ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.