ADVERTISEMENT

ಉತ್ತರ ಪ್ರದೇಶ ಹಿಂಸಾಚಾರ: ಮೃತರ ಸಂಖ್ಯೆ 9ಕ್ಕೆ ಏರಿಕೆ

ಪೌರತ್ವ (ತಿದ್ದುಪಡಿ) ಕಾಯ್ದೆ ವಿರೋಧಿಸಿ ಪ್ರತಿಭಟನೆ

ಏಜೆನ್ಸೀಸ್
Published 21 ಡಿಸೆಂಬರ್ 2019, 6:34 IST
Last Updated 21 ಡಿಸೆಂಬರ್ 2019, 6:34 IST
   

ಲಖನೌ:ಪೌರತ್ವ (ತಿದ್ದುಪಡಿ) ಕಾಯ್ದೆ ವಿರೋಧಿಸಿ ನಡೆಯಿತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದರಿಂದ ಉತ್ತರ ಪ್ರದೇಶದಲ್ಲಿ ಮೃತಪಟ್ಟವರ ಸಂಖ್ಯೆ ಶನಿವಾರ 9ಕ್ಕೆ ಏರಿಕೆಯಾಗಿದೆ.

ಈ ಮಧ್ಯೆ, ಯಾವೊಬ್ಬ ಪ್ರತಿಭಟನಾಕಾರನೂ ಪೊಲೀಸರ ಗುಂಡಿಗೆ ಬಲಿಯಾಗಿಲ್ಲ ಎಂದು ಉತ್ತರ ಪ್ರದೇಶ ಡಿಜಿಪಿ ಒ.ಪಿ.ಸಿಂಗ್ ಹೇಳಿದ್ದಾರೆ. ಒಂದೇ ಒಂದು ಬಾರಿಯೂ ನಾವು ಶೂಟ್ ಮಾಡಿಲ್ಲ ಎಂದು ಅವರು ಹೇಳಿದ್ದಾರೆ. ಒಂದು ವೇಳೆ ಗುಂಡಿನ ದಾಳಿ ನಡೆದಿದೆ ಎಂದಾಗಿದ್ದಲ್ಲಿ ಅದು ಪ್ರತಿಭಟನಾಕಾರರ ಕಡೆಯಿಂದಲೇ ಆಗಿದೆ ಎಂದು ಮತ್ತೊಬ್ಬ ಅಧಿಕಾರಿ ಹೇಳಿದ್ದಾರೆ.

ಶುಕ್ರವಾರ ರಾಜ್ಯದ ಹಲವೆಡೆ ಭುಗಿಲೆದ್ದ ಹಿಂಸಾಚಾರದಲ್ಲಿ 6 ಮಂದಿ ಮೃತಪಟ್ಟಿದ್ದರು. ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಬಿಜ್ನೋರ್‌ನಲ್ಲಿ ಇಬ್ಬರು ಮತ್ತು ಮೀರಠ್‌, ಸಂಭಲ್‌ ಮತ್ತು ಫಿರೋಜಾಬಾದ್‌ ಮತ್ತು ಕಾನ್ಪುರದಲ್ಲಿ ತಲಾ ಒಬ್ಬರು ಮೃತಪಟ್ಟಿದ್ದರು. ಗಲಭೆಗಳಲ್ಲಿ ಸುಮಾರು 50 ಮಂದಿ ಪೊಲೀಸರೂ ಗಾಯಗೊಂಡಿದ್ದರು.

ADVERTISEMENT

ದೇಶದೆಲ್ಲೆಡೆ ಮುಂದುವರಿದ ಪ್ರತಿಭಟನೆ:ಪೌರತ್ವ (ತಿದ್ದುಪಡಿ) ಕಾಯ್ದೆ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಯು ಬಿಹಾರ, ದೆಹಲಿ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಶನಿವಾರವೂ ಮುಂದುವರಿದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.