ಚೆನ್ನೈ:ಪೌರತ್ವ ತಿದ್ದುಪಡಿ ಕಾಯ್ದೆವಿರುದ್ಧ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳನ್ನು ಭೇಟಿ ಮಾಡಲು ತೆರಳಿದ್ದ ನಟ ಕಮಲ್ ಹಾಸನ್ ಅವರನ್ನು ಮದ್ರಾಸ್ ವಿಶ್ವವಿದ್ಯಾಲಯ ಪ್ರವೇಶಿಸದಂತೆ ತಡೆಯಲಾಗಿದೆ.
ಮಕ್ಕಳ್ ನೀಧಿ ಮೈಯಂ (ಎಂಎನ್‌ಎಂ) ಪಕ್ಷದ ಮುಖ್ಯಸ್ಥರೂ ಆಗಿರುವ ಕಮಲ್ ಅವರು ಕೇಂದ್ರ ಸರ್ಕಾರ ಜಾರಿ ಮಾಡಲು ಹೊರಟಿರುವ ಪೌರತ್ವ ತಿದ್ದುಪಡಿ ಕಾಯ್ದೆಗೆ ವಿರೋಧ ವ್ಯಕ್ತಪಡಿಸಿದ್ದಾರೆ.
ಮದ್ರಾಸ್ ವಿಶ್ವವಿದ್ಯಾಲಯ ಭೇಟಿ ವೇಳೆ ಮಾತನಾಡಿರುವ ಅವರು, ‘ನನಗೆ ವಿಶ್ವವಿದ್ಯಾಲಯ ಪ್ರವೇಶ ನಿರಾಕರಿಸಲಾಗಿದೆ. ನಾನು ಸಾಯುವವರೆಗೂ ವಿದ್ಯಾರ್ಥಿ ಎಂದು ಕರೆದುಕೊಳ್ಳಲು ಇಚ್ಛಿಸುತ್ತೇನೆ. ಇಲ್ಲಿ ವಿದ್ಯಾರ್ಥಿಗಳ ಬೆಂಬಲಿಗನಾಗಿ ನಾನು ಬಂದಿದ್ದೇನೆ. ರಾಜಕೀಯ ಪಕ್ಷ ಸ್ಥಾಪಿಸಿದರೂ, ಸ್ಥಾಪಿಸದೇ ಇದ್ದರೂ ನಾನು ನನ್ನ ಧ್ವನಿಯನ್ನು ಎತ್ತುತ್ತಿದ್ದೆ. ಭಾರತದಾದ್ಯಂತ ಇಂತಹ ಧ್ವನಿಗಳು ಕೇಳಿಬರುತ್ತಿವೆ. ನೀವು ಆ ಧ್ವನಿಗಳನ್ನು ಅಡಗಿಸಲು ಸಾಧ್ಯವಿಲ್ಲ’ ಎಂದು ಕಮಲ್ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.