ADVERTISEMENT

ಪೌರತ್ವ ತಿದ್ದುಪಡಿ ಕಾಯ್ದೆ: ಸದ್ಗುರು ವಿಡಿಯೊ ಹಂಚಿಕೊಂಡ ಪ್ರಧಾನಿ ಮೋದಿ

ಏಜೆನ್ಸೀಸ್
Published 30 ಡಿಸೆಂಬರ್ 2019, 10:32 IST
Last Updated 30 ಡಿಸೆಂಬರ್ 2019, 10:32 IST
ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ   

ನವದೆಹಲಿ:ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ(ಎನ್‌ಆರ್‌ಸಿ)ಬಗ್ಗೆ ಸದ್ಗುರು ಜಗ್ಗಿ ವಾಸುದೇವ್‌ ಮಾತನಾಡಿರುವ ವಿಡಿಯೊ ಅನ್ನು ಪ್ರಧಾನಿ ನರೇಂದ್ರ ಮೋದಿ ತಮ್ಮ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಜಗ್ಗಿ ವಾಸುದೇವ್‌ ಅವರು ಕೇಂದ್ರ ಸರ್ಕಾರ ಜಾರಿಗೊಳಿಸಲು ಹೊರಟಿರುವ ಎನ್‌ಆರ್‌ಸಿ ಮತ್ತು ಸಿಎಎ ಕುರಿತು ವಿಡಿಯೊದಲ್ಲಿವಿವರಣೆ ನೀಡಿದ್ದಾರೆ.

ಆ ವಿಡಿಯೊಅನ್ನು ತಮ್ಮ ಅಧಿಕೃತ ಟ್ವಿಟರ್‌ಖಾತೆಯಲ್ಲಿ ಹಂಚಿಕೊಂಡಿರುವ ಪ್ರಧಾನಿ ಮೋದಿ, ’ಸಿಎಎ ಬಗ್ಗೆ ಇಲ್ಲಿರುವ ಸ್ಪಷ್ಟ ವಿವರಣೆ ಕೇಳಿ. ನಮ್ಮ ಭ್ರಾತೃತ್ವ ಸಂಸ್ಕೃತಿ ಮತ್ತು ಐತಿಹಾಸಿಕ ಸನ್ನಿವೇಶಗಳನ್ನು ಸದ್ಗುರು ಇಲ್ಲಿ ತೆರೆದಿಟ್ಟಿದ್ದಾರೆ. ಪಟ್ಟಭದ್ರ ಹಿತಾಸಕ್ತಿಯುಳ್ಳ ಜನರ ಗುಂಪು ನೀಡುತ್ತಿರುವ ತಪ್ಪು ಮಾಹಿತಿ ಬಗ್ಗೆ ಅವರು ತಿಳಿಸಿ ಕೊಟ್ಟಿದ್ದಾರೆ‘ ಎಂದು ಹೇಳಿದ್ದಾರೆ. ಅದರೊಂದಿಗೆ #IndiaSupportsCAA ಎಂಬ ಹ್ಯಾಶ್‌ಟ್ಯಾಗ್‌ ಅನ್ನು ಪ್ರಧಾನಿ ಮೋದಿ ಬಳಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.