ಕೇಂದ್ರ ಗೃಹ ಸಚಿವಾಲಯ
ನವದೆಹಲಿ: ಧಾರ್ಮಿಕ ಕಿರುಕುಳದಿಂದ ಪಾರಾಗಲು ಕಳೆದ ವರ್ಷ ಡಿಸೆಂಬರ್ 31ರ ವರೆಗೆ ಅಫ್ಗಾನಿಸ್ತಾನ, ಬಾಂಗ್ಲಾದೇಶ ಮತ್ತು ಪಾಕಿಸ್ತಾನದಿಂದ ಭಾರತಕ್ಕೆ ಬಂದಿರುವ ಅಲ್ಪಸಂಖ್ಯಾತರಾದ ಹಿಂದೂಗಳು, ಸಿಖ್ಖರು, ಬೌದ್ಧರು, ಜೈನರು, ಪಾರ್ಸಿಗಳು ಹಾಗೂ ಕ್ರೈಸ್ತರು ಇಲ್ಲಿಯೇ ಉಳಿದುಕೊಳ್ಳಬಹುದು ಎಂದು ಕೇಂದ್ರ ಗೃಹ ಸಚಿವಾಲಯ ಹೇಳಿದೆ.
ಇವರು ಪಾಸ್‌ಪೋರ್ಟ್ ಅಥವಾ ಪ್ರಯಾಣಕ್ಕೆ ಸಂಬಂಧಿಸಿ ಯಾವುದೇ ದಾಖಲೆಗಳನ್ನು ಹೊಂದಿರದಿದ್ದರೂ ಭಾರತದಲ್ಲಿ ವಾಸಿಸಲು ಅನುಮತಿ ನೀಡಲಾಗುವುದು ಎಂದೂ ಸಚಿವಾಲಯ ಹೇಳಿದೆ.
ಕಳೆದ ವರ್ಷ ಜಾರಿಗೆ ಬಂದಿರುವ ಪೌರತ್ವ (ತಿದ್ದುಪಡಿ) ಕಾಯ್ದೆಯಡಿ, ಈ ಅಲ್ಪಸಂಖ್ಯಾತರಿಗೆ ಭಾರತೀಯ ಪೌರತ್ವ ನೀಡಲಾಗುತ್ತದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.