ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಮತ್ತು ಅಂತರರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನ ಸೇನೆ ನಡೆಸಿದ ಅಪ್ರಚೋದಿತ ಗುಂಡಿನ ದಾಳಿ ಮತ್ತು ಶೆಲ್ ದಾಳಿಯಲ್ಲಿ 9 ನಾಗರಿಕರು ಮೃತಪಟ್ಟಿದ್ದು, 40ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ರಕ್ಷಣಾ ಮೂಲಗಳು ತಿಳಿಸಿವೆ.
ಪಾಕ್‌ನ ಅಪ್ರಚೋದಿತ ಗುಂಡಿನ ದಾಳಿಗೆ ಭಾರತೀಯ ಸೇನೆಯು ಸೂಕ್ತ ರೀತಿಯಲ್ಲಿ ಪ್ರತ್ಯುತ್ತರ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಂಗಳವಾರ ತಡರಾತ್ರಿ ಪಾಕಿಸ್ತಾನ ಸೇನೆಯು ಜಮ್ಮು ಮತ್ತು ಕಾಶ್ಮೀರದ ಎಲ್‌ಒಸಿ ಮತ್ತು ಅಂತರರಾಷ್ಟ್ರೀಯ ಗಡಿಯಲ್ಲಿ ಶೆಲ್ ದಾಳಿ ಸೇರಿದಂತೆ ಅನಿಯಂತ್ರಿತ ಗುಂಡಿನ ದಾಳಿ ನಡೆಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಏಪ್ರಿಲ್ 22ರಂದು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ 26 ಪ್ರವಾಸಿಗರು ಮೃತಪಟ್ಟಿದ್ದರು. ಇದರ ಬೆನ್ನಲ್ಲೇ ಭಾರತ ಮತ್ತು ಪಾಕಿಸ್ತಾನದ ಮಧ್ಯೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಪಾಕ್ ಮೇಲೆ ಭಾರತ ಹಲವು ನಿರ್ಬಂಧಗಳನ್ನು ವಿಧಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.