ADVERTISEMENT

ಸಿಜೆಐ ನೇಮಕ ಪ್ರಶ್ನಿಸಿ ಅರ್ಜಿ: ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಮೂರ್ತಿಗಳು

ಪಿಟಿಐ
Published 13 ಜನವರಿ 2023, 15:29 IST
Last Updated 13 ಜನವರಿ 2023, 15:29 IST
ಡಿ.ವೈ. ಚಂದ್ರಚೂಡ್
ಡಿ.ವೈ. ಚಂದ್ರಚೂಡ್   

ನವದೆಹಲಿ: ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ (ಸಿಜೆಐ) ಡಿ.ವೈ. ಚಂದ್ರಚೂಡ್ ಅವರ ನೇಮಕವನ್ನು ಪ್ರಶ್ನಿಸಿ ವಜಾಗೊಳಿಸಿದ್ದ ಅರ್ಜಿಯನ್ನು, ಮರು ಪರಿಶೀಲಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯಿಂದ ದೆಹಲಿ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮ ಹಾಗೂ ನ್ಯಾಯಮೂರ್ತಿ ಸುಬ್ರಮೋನಿಯಂ ಪ್ರಸಾದ್ ಅವರು ಶುಕ್ರವಾರ ಹಿಂದೆ ಸರಿದಿದ್ದಾರೆ.

ಸಿಜೆಐ ನೇಮಕದ ವಿರುದ್ಧದ ಅರ್ಜಿಯಲ್ಲಿ ಅವರ ಕುರಿತು ಕೆಲವು ಆರೋಪಗಳಿರುವುದನ್ನು ಗಮನಿಸಿದ ಹೈಕೋರ್ಟ್‌ನ ವಿಭಾಗೀಯ ಪೀಠವು, ಈ ಅರ್ಜಿಯ ವಿಚಾರಣೆ ನಡೆಸಲು ಸಾಧ್ಯವಿಲ್ಲ. ಜನವರಿ 16ರಂದು ಮತ್ತೊಂದು ಪೀಠವು ಅರ್ಜಿಯ ವಿಚಾರಣೆ ನಡೆಸಲಿದೆ ಎಂದೂ ಹೇಳಿದೆ.

ಕೇಂದ್ರ ಸರ್ಕಾರದ ಪರ ವಾದ ಮಂಡಿಸಿದ ವಕೀಲರು, ಅರ್ಜಿದಾರರ ವಿರುದ್ಧ ನ್ಯಾಯಾಂಗ ನಿಂದನೆಯ ಮೊಕದ್ದಮೆ ದಾಖಲಿಸುವಂತೆ ಒತ್ತಾಯಿಸುವುದಾಗಿ ಹೇಳಿದರು.

ADVERTISEMENT

ಚಂದ್ರಚೂಡ್ ಅವರನ್ನು ಸಿಜೆಐ ಆಗಿ ನೇಮಿಸಿರುವುದನ್ನು ಪ್ರಶ್ನಿಸಿ ಅರ್ಜಿದಾರರಾದ ಗ್ರಾಮ ಉದಯ ಫೌಂಡೇಷ್‌ನ ಅಧ್ಯಕ್ಷ ಸಂಜೀವ್ ಕುಮಾರ್ ತಿವಾರಿ ಎಂಬುವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) 2022ರ ನ. 11ರಂದು ವಜಾಗೊಳಿಸಿದ್ದ ದೆಹಲಿ ಹೈಕೋರ್ಟ್ ₹ 1 ಲಕ್ಷ ದಂಡವನ್ನೂ ವಿಧಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.