ADVERTISEMENT

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ದೀಪಂಕರ್ ದತ್ತಾ ಪ್ರಮಾಣವಚನ

ಪಿಟಿಐ
Published 12 ಡಿಸೆಂಬರ್ 2022, 5:55 IST
Last Updated 12 ಡಿಸೆಂಬರ್ 2022, 5:55 IST
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್   

ನವದೆಹಲಿ: ಬಾಂಬೆ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿದ್ದ ದೀಪಂಕರ್‌ ದತ್ತಾ ಅವರುಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ಸೋಮವಾರ ಪ್ರಮಾಣವಚನ ಸ್ವೀಕರಿಸಿದರು.

ನ್ಯಾ. ದತ್ತಾ ಅವರಿಗೆ ಬೆಳಗ್ಗೆ 10.36ಕ್ಕೆ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ.ವೈ.ಚಂದ್ರಚೂಡ್‌ ಅವರು ಪ್ರಮಾಣವಚನ ಬೋಧಿಸಿದರು.

ಇದರೊಂದಿಗೆ,ಸಿಜೆಐ ಸೇರಿದಂತೆ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳ ಸಂಖ್ಯೆ 28ಕ್ಕೆ ಏರಿಕೆಯಾಗಿದೆ.

ADVERTISEMENT

ನ್ಯಾ. ದತ್ತಾ ಅವರು ಕೊಲ್ಕತ್ತ ಹೈಕೋರ್ಟ್‌ನ ನ್ಯಾಯಮೂರ್ತಿಯಾಗಿದ್ದ ಸಲೀಲ್‌ ಕುಮಾರ್‌ ದತ್ತಾ ಅವರ ಪುತ್ರ ಹಾಗೂ ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಯಾಗಿದ್ದ ಅಮಿತವ್‌ ರಾಯ್‌ ಅವರ ಸಹೋದರ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.