
ನವದೆಹಲಿ: ಸುಪ್ರೀಂ ಕೋರ್ಟ್‌ನ ಹಿರಿಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರನ್ನು ಮುಂದಿನ ಸಿಜೆಐ ಆಗಿ ನೇಮಕ ಮಾಡಲು ಕೇಂದ್ರ ಕಾನೂನು ಸಚಿವಾಲಯಕ್ಕೆ ಸಿಜೆಐ ಬಿ.ಆರ್. ಗವಾಯಿ ಅವರು ಶಿಫಾರಸು ಮಾಡಿದ್ದಾರೆ.
ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರು 2025ರ ಮೇ 14 ರಂದು ಸಿಜೆಐ ಆಗಿ ಅಧಿಕಾರವಹಿಸಿಕೊಂಡಿದ್ದರು. ನ. 23ಕ್ಕೆ ನಿವೃತ್ತರಾಗಲಿದ್ದಾರೆ.
ಬಿ.ಆರ್. ಗವಾಯಿ ಅವರ ನಂತರ ಹಿರಿಯ ನ್ಯಾಯಮೂರ್ತಿಯಾಗಿರುವ ಸೂರ್ಯಕಾಂತ್ ಅವರು ನ.24ಕ್ಕೆ ಸುಪ್ರೀಂ ಕೋರ್ಟ್‌ನ 53ನೇ ಸಿಜೆಐ ಆಗಿ ಆಯ್ಕೆಯಾಗುವ ಸಾಧ್ಯತೆಯಿದೆ.
ನ್ಯಾ. ಸೂರ್ಯಕಾಂತ್ ಅವರು ಮೇ 24, 2019ರಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಯಾಗಿ ಬಡ್ತಿ ಪಡೆದಿದ್ದರು. 2027ರ ಫೆ. 9ರಂದು ಅವರು ನಿವೃತ್ತರಾಗಲಿದ್ದಾರೆ.
ಒಂದು ವೇಳೆ ಸಿಜೆಐ ಆಗಿ ಆಯ್ಕೆಯಾದರೆ ಅವರು ಒಂದು ವರ್ಷ ಹಾಗೂ ಎರಡು ತಿಂಗಳು ಆ ಸ್ಥಾನದಲ್ಲಿ ಇರಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.