ನವದೆಹಲಿ: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲಿನ ದಾಳಿಯನ್ನು ಖಂಡಿಸಲು ಪದಗಳೇ ಸಾಲದು. ಇದು ಕೇವಲ ಅವರ ಮೇಲಿನ ದಾಳಿಯಲ್ಲ, ನಮ್ಮ ಸಂವಿಧಾನದ ಮೇಲೂ ನಡೆದ ದಾಳಿ ಎಂದು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಸೋಮವಾರ ಹೇಳಿದ್ದಾರೆ.
ಮುಖ್ಯ ನ್ಯಾಯಮೂರ್ತಿ ಗವಾಯಿ ತುಂಬಾ ದಯಾಳು. ಇಡೀ ರಾಷ್ಟ್ರ ಅವರ ಜೊತೆ ಒಗ್ಗಟ್ಟಿನಿಂದ ನಿಲ್ಲಬೇಕು ಎಂದಿದ್ದಾರೆ.
ಸಿಜೆಐ ನೇತೃತ್ವದ ಪೀಠವು ಪ್ರಕರಣಗಳ ಬಗ್ಗೆ ವಿಚಾರಣೆ ನಡೆಸುತ್ತಿರುವ ವೇಳೆ ಪೀಠದ ಮುಂದೆ ಬಂದ ವಕೀಲ ತನ್ನ ಕಾಲಿಂದ ಶೂ ಕಳಚಿ ಗವಾಯಿ ಅವರನ್ನು ಗುರಿಯಾಗಿಸಿ ಎಸೆದಿದ್ದಾನೆ. ತಕ್ಷಣ ಅಲ್ಲಿದ್ದ ಭದ್ರತಾ ಸಿಬ್ಬಂದಿ ವಕೀಲನನ್ನು ತಡೆದು ಹೊರಗೆ ಕಳಿಸಿದ್ದಾರೆ.
ಘಟನೆ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ, ಇಂತಹ ಘಟನೆಗಳಿಂದ ನಾನು ವಿಚಲಿತಗೊಳ್ಳುವುದಿಲ್ಲ. ಇದು ನನ್ನ ಮೇಲೆ ಪರಿಣಾಮ ಬೀರುವುದಿಲ್ಲ ಎಂದಿದ್ದಾರೆ. ಈ ಬಗ್ಗೆ 'ಬಾರ್ ಅಂಡ್ ಬೆಂಚ್' ವರದಿ ಮಾಡಿದೆ.
ವಕೀಲ ನ್ಯಾಯಾಲಯದ ಆವರಣದಿಂದ ಹೊರನಡೆಯುವ ವೇಳೆ, 'ಸನಾತನ ಧರ್ಮದ ಅಪಮಾನ ಸಹಿಸುವುದಿಲ್ಲ' ಎಂದು ಕೂಗಿರುವುದಾಗಿಯೂ ಉಲ್ಲೇಖಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.