ADVERTISEMENT

ನ್ಯಾಯಾಂಗದಲ್ಲಿ ಹಸ್ತಕ್ಷೇಪ ಸಲ್ಲದು: ಸಿಜೆಐ ಬಿ.ಆರ್‌.ಗವಾಯಿ

ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಬಿ.ಆರ್‌.ಗವಾಯಿ

ಪಿಟಿಐ
Published 8 ಜುಲೈ 2025, 15:29 IST
Last Updated 8 ಜುಲೈ 2025, 15:29 IST
ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಂಡಿರುವ ಬಿ.ಆರ್‌.ಗವಾಯಿ ಅವರನ್ನು ಮಹಾರಾಷ್ಟ್ರ ವಿಧಾನಸಭೆಯ ಪರವಾಗಿ ಮುಂಬೈನಲ್ಲಿ ಮಂಗಳವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ದೇವೇಂದ್ರ ಪಡಣವೀಸ್‌ ಅವರು ಸನ್ಮಾನಿಸಿದರು. ಉಪ ಮುಖ್ಯಮಂತ್ರಿಗಳಾದ ಏಕನಾಥ ಶಿಂದೆ, ಅಜಿತ್‌ ಪವಾರ್ ಇದ್ದರು–ಪಿಟಿಐ ಚಿತ್ರ

ಮುಂಬೈ: ‘ನ್ಯಾಯಾಂಗವು ಕಾರ್ಯಾಂಗದ ಹಸ್ತಕ್ಷೇಪದಿಂದ ಸಂಪೂರ್ಣವಾಗಿ ಮುಕ್ತವಾಗಿರಬೇಕು ಎಂದು ಡಾ.ಬಿ.ಆರ್‌.ಅಂಬೇಡ್ಕರ್ ಬಯಸಿದ್ದರು’ ಎಂದು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಭೂಷಣ್‌ ರಾಮಕೃಷ್ಣ ಗವಾಯಿ ಅವರು ಅಭಿಪ್ರಾಯಪಟ್ಟರು.

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಪದೋನ್ನತಿ ಹೊಂದಿದ್ದ ಗವಾಯಿ ಅವರಿಗೆ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಆಯೋಜಿಸಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

‘ಶಾಂತಿ ಹಾಗೂ ಯುದ್ಧದ ಸಮಯದಲ್ಲಿಯೂ ದೇಶವನ್ನು ಒಗ್ಗಟ್ಟಿನಿಂದ ಇಡುವ ದೇಶದ ಸಂವಿಧಾನ ಶ್ರೇಷ್ಠತೆಯನ್ನು ನಾವೆಲ್ಲರೂ ನಂಬುತ್ತೇವೆ ಎಂದು ಅಂಬೇಡ್ಕರ್‌ ಹೇಳಿದ್ದರು. ಸಂವಿಧಾನವು ಕಾರ್ಯಾಂಗ, ಶಾಸಕಾಂಗ ಹಾಗೂ ನ್ಯಾಯಾಂಗಕ್ಕೆ ಹಕ್ಕುಗಳನ್ನು ನೀಡಿದೆ. ಅಂಬೇಡ್ಕರ್‌ ಅವರ ಪ್ರಕಾರ, ನ್ಯಾಯಾಂಗವು ನಾಗರಿಕರ ಹಕ್ಕುಗಳ ರಕ್ಷಕರಾಗಿದ್ದು, ಕಾವಲುನಾಯಿಯಂತೆ ಕೆಲಸ ಮಾಡಬೇಕು. ಸಂವಿಧಾನವು ಸ್ಥಿರವಾಗಿರಲು ಸಾಧ್ಯವಿಲ್ಲ, ಸದ ವಿಕಸನಗೊಳ್ಳುತ್ತಿರಬೇಕು ಎಂದು ಬಯಸಿದ್ದರು’ ಎಂದು ಗವಾಯಿ ತಿಳಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.