ADVERTISEMENT

ಕೊಲಿಜಿಯಂ ವ್ಯವಸ್ಥೆ | ಸಂಪೂರ್ಣ ಪಾರದರ್ಶಕತೆ: CJI ಬಿ.ಆರ್‌.ಗವಾಯಿ

ಪಿಟಿಐ
Published 4 ಜುಲೈ 2025, 15:56 IST
Last Updated 4 ಜುಲೈ 2025, 15:56 IST
ಬಿ.ಆರ್‌.ಗವಾಯಿ
ಬಿ.ಆರ್‌.ಗವಾಯಿ   

ಮುಂಬೈ: ನ್ಯಾಯಮೂರ್ತಿಗಳ ನೇಮಕಕ್ಕೆ ಶಿಫಾರಸು ಮಾಡುವ ಕೊಲಿಜಿಯಂ ವ್ಯವಸ್ಥೆಯಲ್ಲಿ ಸಂಪೂರ್ಣ ಪಾರದರ್ಶಕತೆ ತರಲಾಗುವುದು ಎಂದು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಬಿ.ಆರ್‌.ಗವಾಯಿ ಶುಕ್ರವಾರ ಹೇಳಿದ್ದಾರೆ.

52ನೇ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಂಡ ಪ್ರಯುಕ್ತ ಬಾಂಬೆ ಬಾರ್‌ ಅಸೋಸಿಯೇಷನ್‌ನಿಂದ ಬಾಂಬೆ ಹೈಕೋರ್ಟ್‌ನಲ್ಲಿ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದ್ದಾರೆ. 

ಅರ್ಹತೆ ವಿಚಾರದಲ್ಲಿ ಎಂದಿಗೂ ರಾಜಿಯಾಗುವುದಿಲ್ಲ. ನಾವು ಸಮಾಜದ ಎಲ್ಲ ವರ್ಗದವರ ಪ್ರಾತಿನಿಧ್ಯವನ್ನು ಹೊಂದಿದ್ದೇವೆ. ಶಿಫಾರಸುಗೊಳ್ಳುವ ಎಲ್ಲ ಹೆಸರುಗಳ ಫಾಲೋಅಪ್‌ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ADVERTISEMENT

ಸಂಜೀವ್‌ ಖನ್ನಾ ಅವರು ಮುಖ್ಯ ನ್ಯಾಯಮೂರ್ತಿಯಾಗಿದ್ದ ಸಂದರ್ಭದಲ್ಲಿ ಕೊಲಿಜಿಯಂ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರಲು ಪ್ರಯತ್ನಿಸಿದ್ದರು. ನಾಗಪುರದಲ್ಲಿ ಕಳೆದ ವಾರ ನಡೆದಿದ್ದ ಕಾರ್ಯಕ್ರಮವೊಂದರಲ್ಲಿ, ಕೊಲಿಜಿಯಂ ವ್ಯವಸ್ಥೆಯಲ್ಲಿ ಹಸ್ತಕ್ಷೇಪದ ಕುರಿತು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ ದೀಪಂಕರ್‌ ದತ್ತ ಅವರು ಮಾತನಾಡಿದ್ದರು ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.