ADVERTISEMENT

ರಾಜಕೀಯ ವಿರೋಧವು ಹಗೆತನವಾಗಿ ಬದಲಾಗಿರುವುದು ಪ್ರಜಾತಂತ್ರದ ಲಕ್ಷಣವಲ್ಲ: ಸಿಜೆಐ ರಮಣ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 16 ಜುಲೈ 2022, 13:53 IST
Last Updated 16 ಜುಲೈ 2022, 13:53 IST
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಮಣ
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಮಣ    

ಜೈಪುರ: ರಾಜಕೀಯ ವಿರೋಧವು ಹಗೆತನವಾಗಿ ಪರಿವರ್ತನೆಯಾಗುತ್ತಿದೆ. ಇದು ಆರೋಗ್ಯಕರ ಪ್ರಜಾಪ್ರಭುತ್ವದ ಲಕ್ಷಣವಲ್ಲ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಮಣ ಶನಿವಾರ ಹೇಳಿದ್ದಾರೆ.

ಸರಕಾರ ಮತ್ತು ಪ್ರತಿಪಕ್ಷಗಳ ನಡುವಿನ ಪರಸ್ಪರ ಗೌರವವು ಕ್ಷೀಣಿಸುತ್ತಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ರಾಜಸ್ಥಾನ ವಿಧಾನಸಭೆಯಲ್ಲಿ ಕಾಮನ್‌ವೆಲ್ತ್ ಪಾರ್ಲಿಮೆಂಟರಿ ಅಸೋಸಿಯೇಷನ್ ​​(ಸಿಪಿಎ) ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರಮಣ ಈ ಮಾತುಗಳನ್ನು ಹೇಳಿದ್ದಾರೆ.

ADVERTISEMENT

‘ರಾಜಕೀಯ ವಿರೋಧವು ಹಗೆತನವಾಗಿ ಬದಲಾಗಬಾರದು. ಆದರೆ, ಇಂತಹ ಪರಿಸ್ಥಿತಿಯನ್ನು ನಾವೀಗ ನೋಡುತ್ತಿದ್ದೇವೆ. ಇದು ನೋವಿನ ಸಂಗತಿಯಾಗಿದೆ. ಇದು ಆರೋಗ್ಯಕರ ಪ್ರಜಾಪ್ರಭುತ್ವದ ಲಕ್ಷಣವಲ್ಲ’ ಎಂದು ಅಭಿಪ್ರಾಯಪಟ್ಟಿದ್ದಾರೆ.

‘ದೇಶದಲ್ಲಿನ ಶಾಸಕಾಂಗದ ಕಾರ್ಯಕ್ಷಮತೆಯ ಗುಣಮಟ್ಟ ಕುಸಿಯುತ್ತಿರುವುದು ದುಃಖಕರ ವಿಚಾರ’ ಎಂದೂ ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.