ADVERTISEMENT

ನ್ಯಾಯಾಂಗ ಮೂಲಸೌಕರ್ಯ: ‘ಸುಪ್ರೀಂ’ ಮುಖ್ಯ ನ್ಯಾಯಮೂರ್ತಿ ಅಸಮಾಧಾನ

ಕಾನೂನು ಸಚಿವರ ಎದುರಲ್ಲೇ ಸಮಸ್ಯೆ ಬಿಚ್ಚಿಟ್ಟ ನ್ಯಾಯಮೂರ್ತಿಗಳು

ಪಿಟಿಐ
Published 23 ಅಕ್ಟೋಬರ್ 2021, 21:14 IST
Last Updated 23 ಅಕ್ಟೋಬರ್ 2021, 21:14 IST
ಎನ್‌.ವಿ. ರಮಣ
ಎನ್‌.ವಿ. ರಮಣ   

ಮುಂಬೈ : ದೇಶದ ನ್ಯಾಯಾಂಗ ಮೂಲಸೌಕರ್ಯದಲ್ಲಿನ ಸುಧಾರಣೆ ಹಾಗೂ ನಿರ್ವಹಣೆ ರೀತಿಯು ತಾತ್ಕಾಲಿಕವಾಗಿದ್ದು, ಯೋಜನಾಬದ್ಧವಾಗಿಲ್ಲ ಎಂದು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಎನ್‌.ವಿ.ರಮಣ ಅಸಮಾಧಾನ ವ್ಯಕ್ತಪಡಿಸಿದರು.

ಬಾಂಬೆ ಹೈಕೋರ್ಟ್‌ನ ಔರಂಗಾಬಾದ್‌ ಪೀಠದ ಕಟ್ಟಡದ ಎರಡು ಉಪಭವನಗಳ ಉದ್ಘಾಟನಾ ಸಮಾರಂಭದಲ್ಲಿ ಶನಿವಾರ ಮಾತನಾಡಿದ ಅವರು, ಮೂಲಸೌಕರ್ಯವಿಲ್ಲದೇ ನ್ಯಾಯಾಂಗವು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವುದು ಸಾಧ್ಯವಿಲ್ಲಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದ ಆರಂಭದಲ್ಲಿ ಮಾತನಾಡಿದ್ದ ಕೇಂದ್ರ ಕಾನೂನು ಸಚಿವ ಕಿರಣ್‌ ರಿಜಿಜು, ‘ಸದೃಢವಾದ ನ್ಯಾಯಾಂಗವು ಪ್ರಜಾಪ್ರಭುತ್ವದ ಯಶಸ್ಸಿನಲ್ಲಿ ಬಹುಮುಖ್ಯ ಪಾತ್ರ ವಹಿಸುವುದರಿಂದ, ನ್ಯಾಯಾಂಗದ ಮೂಲಸೌಕರ್ಯ ಸುಧಾರಣೆಗಾಗಿ ಕೇಂದ್ರ ಸರ್ಕಾರವು ಹಲವಾರು ನಿರ್ಧಾರಗಳನ್ನು ಕೈಗೊಂಡಿದೆ. ಕೆಳ ನ್ಯಾಯಾಲಯಗಳ ಮೂಲಸೌಕರ್ಯ ಅಭಿವೃದ್ಧಿಗಾಗಿ ₹ 9,000 ಕೋಟಿ ಬಿಡುಗಡೆ ಮಾಡುವ ಸಂಬಂಧ ಕಳೆದ ಬಾರಿಯ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ’ ಎಂದು ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.