Supreme Court of India
ನವದೆಹಲಿ: ಸಿಜೆಐ ಬಿ.ಆರ್.ಗವಾಯಿ ಮತ್ತು ಸುಪ್ರೀಂ ಕೋರ್ಟ್‌ನ ಇತರೆ ನ್ಯಾಯಮೂರ್ತಿಗಳು ಪ್ರಧಾನ ಮಂತ್ರಿ ಪ್ರವಾಹ ಪರಿಹಾರ ನಿಧಿಗೆ ತಲಾ ₹25 ಸಾವಿರ ದೇಣಿಗೆ ನೀಡಿದ್ದಾರೆ.
‘ದೇಶದ ವಿವಿಧ ಭಾಗಗಳಲ್ಲಿ ಪ್ರವಾಹದಿಂದ ಜನ–ಜೀವನ ಅಸ್ತವ್ಯಸ್ತಗೊಂಡಿದೆ. ಮಾನವೀಯ ಮೌಲ್ಯಗಳನ್ನು ಎತ್ತಿಹಿಡಿಯುವಲ್ಲಿ ಮತ್ತು ದೇಶ ಸೇವೆಯಲ್ಲಿ ನ್ಯಾಯಾಂಗದ ಬದ್ಧತೆಯು ಅಚಲವಾಗಿದೆ’ ಎಂದು ನ್ಯಾಯಮೂರ್ತಿಗಳು ಹೇಳಿದ್ದಾರೆ.
‘ಪ್ರವಾಹ ಪರಿಹಾರ, ಪುನಶ್ಚೇತನ ಕಾರ್ಯಗಳು ತ್ವರಿತವಾಗಿ ನಡೆದು, ಸಂಕಷ್ಟಕ್ಕೆ ಸಿಲುಕಿರುವ ಜನರ ಜೀವನವು ಆದಷ್ಟು ಬೇಗ ಸಹಜ ಸ್ಥಿತಿಗೆ ಮರಳಲಿ’ ಎಂದು ಸಿಜೆಐ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.