ADVERTISEMENT

CJI ಸೂರ್ಯ ಕಾಂತ್‌ ಪ್ರಮಾಣ; ಸಾಂವಿಧಾನಿಕ ಮೌಲ್ಯಗಳು ಗಟ್ಟಿಗೊಳ್ಳುತ್ತವೆ: ಖರ್ಗೆ

ಪಿಟಿಐ
Published 24 ನವೆಂಬರ್ 2025, 6:44 IST
Last Updated 24 ನವೆಂಬರ್ 2025, 6:44 IST
<div class="paragraphs"><p>ಮಲ್ಲಿಕಾರ್ಜುನ ಖರ್ಗೆ</p></div>

ಮಲ್ಲಿಕಾರ್ಜುನ ಖರ್ಗೆ

   

ನವದೆಹಲಿ: 'ಭಾರತೀಯ ನ್ಯಾಯಾಂಗ ವ್ಯವಸ್ಥೆಯ ನಿರ್ಣಾಯಕ ಘಟ್ಟದಲ್ಲಿ ದೇಶದ ಮುಖ್ಯ ನ್ಯಾಯಮೂರ್ತಿಯಾಗಿ (ಸಿಜೆಐ) ನ್ಯಾಯಮೂರ್ತಿ ಸೂರ್ಯ ಕಾಂತ್‌ ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ' ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಭಿಪ್ರಾಯಪಟ್ಟಿದ್ದಾರೆ.

'ನ್ಯಾಯಮೂರ್ತಿ ಸೂರ್ಯ ಕಾಂತ್‌ ಮುಂದಾಳತ್ವದಲ್ಲಿ ಸಾಂವಿಧಾನಿಕ ಮೌಲ್ಯಗಳು ಹಾಗೂ ದೇಶದ ಕಾನೂನಿನ ಬಗ್ಗೆ ಜನರಲ್ಲಿ ಇರುವ ನಂಬಿಕೆ ಮತ್ತಷ್ಟು ಗಟ್ಟಿಗೊಳ್ಳುವ ನಂಬಿಕೆಯಿದೆ' ಎಂದು ಅವರು ಹೇಳಿದ್ದಾರೆ.

ADVERTISEMENT

ನ್ಯಾಯಮೂರ್ತಿ ಸೂರ್ಯ ಕಾಂತ್‌ ಅವರು ಸುಪ್ರೀಂ ಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ (ಸಿಜೆಐ) ಇಂದು (ಸೋಮವಾರ) ಪ್ರಮಾಣ ವಚನ ಸ್ವೀಕರಿಸಿದ್ದಾರೆ.

'ದೇಶದ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸೂರ್ಯ ಕಾಂತ್‌ ಅವರಿಗೆ ನನ್ನ ಅಭಿನಂದನೆಗಳು. ನ್ಯಾಯಾಂಗ ವ್ಯವಸ್ಥೆಯ ನಿರ್ಣಾಯಕ ಘಟ್ಟದಲ್ಲಿ ಅವರ 14 ತಿಂಗಳ ಅಧಿಕಾರವಧಿಯು ಆರಂಭವಾಗುತ್ತದೆ' ಎಂದು ಖರ್ಗೆ ಹೇಳಿದ್ದಾರೆ.

'ನ್ಯಾಯಾಂಗದ ಮೇಲೆ ಜನರಿಗೆ ಇರುವ ನಂಬಿಕೆಯು ಮುಂದುವರಿಯುತ್ತದೆ ಎಂಬ ನಂಬಿಕೆ ನನಗಿದೆ' ಎಂದು ಹೇಳಿದ್ದಾರೆ.

ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ನ್ಯಾಯಮೂರ್ತಿ ಸೂರ್ಯ ಕಾಂತ್‌ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರತಿಜ್ಞಾ ವಿಧಿ ಬೋಧಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.