
ನವದೆಹಲಿ: ನ್ಯಾಯಾಂಗದಲ್ಲಿ ಕೃತಕ ಬುದ್ಧಿಮತ್ತೆ (ಎಐ) ಪರಿಕರಗಳ ಅಳವಡಿಕೆ, ಅಭಿವೃದ್ಧಿ ಮತ್ತು ನಿಯೋಜನೆಗೆ ಸಂಬಂಧಿಸಿದ ಕ್ರಮಗಳ ಮೇಲ್ವಿಚಾರಣೆಗೆ ಸುಪ್ರೀಂ ಕೋರ್ಟ್‌ನ ಎಐ ಸಮಿತಿಯನ್ನು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯಕಾಂತ್ ಅವರು ಬುಧವಾರ ಪುನರ್‌ರಚಿಸಿದ್ದಾರೆ.
ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ ಪಿ.ಎಸ್.ನರಸಿಂಹ ಅವರು ಸಮಿತಿಯ ನೇತೃತ್ವ ವಹಿಸಲಿದ್ದಾರೆ. ಮಧ್ಯಪ್ರದೇಶ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಸಂಜೀವ್ ಸಚ್‌ದೇವ, ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್, ಕೇರಳ ಹೈಕೋರ್ಟ್‌ನ ನ್ಯಾಯಮೂರ್ತಿ ರಾಜಾ ವಿಜಯರಾಘವನ್ ವಿ, ಹರಿಯಾಣ ಹೈಕೋರ್ಟ್‌ನ ನ್ಯಾಯಮೂರ್ತಿ ಅನೂಪ್ ಚಿತ್ಕಾರ ಸದಸ್ಯರಾಗಿರುತ್ತಾರೆ ಎಂದು ಸುಪ್ರೀಂ ಕೋರ್ಟ್ ಪ್ರಕಟಣೆಯಲ್ಲಿ ತಿಳಿಸಿದೆ.
ಸುಪ್ರೀಂ ಕೋರ್ಟ್‌ನ ರಿಜಿಸ್ಟ್ರಾರ್ (ತಂತ್ರಜ್ಞಾನ) ಅನುಪಮ್ ಪಾತ್ರಾ ಸಮಿತಿಯ ಸದಸ್ಯ (ಕಾರ್ಯದರ್ಶಿ) ಮತ್ತು ಸಂಚಾಲಕರಾಗಿ ಕಾರ್ಯ ನಿರ್ವಹಸಲಿದ್ದಾರೆ ಮತ್ತು ಇ–ಸಮಿತಿ ಸದಸ್ಯ ಆಶಿಶ್ ಜೆ. ಶಿರಾಧೋಂಕರ್ ವಿಶೇಷ ಆಹ್ವಾನಿತರಾಗಿರುತ್ತಾರೆ ಎಂದು ಪ್ರಕಟಣೆ ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.