ADVERTISEMENT

ಈದ್ಗಾ ಮೈದಾನದಲ್ಲಿ ಗಣೇಶ ಚತುರ್ಥಿ: ವಿಚಾರಣೆ ತ್ರಿಸದಸ್ಯ ಪೀಠಕ್ಕೆ ವರ್ಗಾವಣೆ

ಪಿಟಿಐ
Published 30 ಆಗಸ್ಟ್ 2022, 12:18 IST
Last Updated 30 ಆಗಸ್ಟ್ 2022, 12:18 IST
ಪಿಟಿಐ ಚಿತ್ರ
ಪಿಟಿಐ ಚಿತ್ರ   

ನವದೆಹಲಿ: ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನಕ್ಕೆ ಸಂಬಂಧಿಸಿದ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಯು ಯು ಲಲಿತ್ ಅವರು ಮಂಗಳವಾರ ತ್ರಿಸದಸ್ಯ ಪೀಠವನ್ನು ರಚಿಸಿದ್ದಾರೆ.

ಮೈದಾನದಲ್ಲಿ ಗಣೇಶ ಚತುರ್ಥಿ ಆಚರಣೆಗೆ ಅನುಮತಿ ನೀಡಿರುವ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಕರ್ನಾಟಕ ವಕ್ಫ್ ಮಂಡಳಿ ಅರ್ಜಿ ಸಲ್ಸಿಸಿತ್ರು.

ತ್ರಿಸದಸ್ಯ ಪೀಠವು ನ್ಯಾಯಮೂರ್ತಿಗಳಾದ ಇಂದಿರಾ ಬ್ಯಾನರ್ಜಿ, ಅಭಯ್ ಎಸ್ ಓಕಾ ಮತ್ತು ಎಂಎಂ ಸುಂದ್ರೇಶ್ ಅವರನ್ನು ಒಳಗೊಂಡಿದೆ.

ADVERTISEMENT

ಪ್ರಕರಣ ಕುರಿತಂತೆ, ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರನ್ನೊಳಗೊಂಡ ದ್ವಿಸದಸ್ಯ ಪೀಠವು ಭಿನ್ನ ಅಭಿಪ್ರಾಯವನ್ನು ಉಲ್ಲೇಖಿಸಿ ಸಿಜೆಐಗೆ ಶಿಫಾರಸು ಮಾಡಿದನಂತರ ಈ ಆದೇಶ ಬಂದಿದೆ.

‘ಎರಡೂ ಪಕ್ಷಗಳ ವಾದವನ್ನು ಒಂದು ಹಂತದವರೆಗೆ ಆಲಿಸಿದ್ದೇವೆ. ಆದರೆ, ವಿಚಾರಣೆ ಅಂತ್ಯಗೊಳಿಸಲು ಅಥವಾ ಯಾವುದೇ ಒಮ್ಮತಕ್ಕೆ ಬರಲು ಸಾಧ್ಯವಾಗಲಿಲ್ಲ. ಹೀಗಾಗಿ, ಈ ವಿಷಯವನ್ನು ಸಿಜೆಐ ಮುಂದೆ ಪಟ್ಟಿ ಮಾಡಲು ನಿರ್ಧರಿಸಿದೆವು’ ಎಂದು ಸುಪ್ರೀಂ ಕೋರ್ಟ್‌ನ ದ್ವಿಸದಸ್ಯ ಪೀಠ ಹೇಳಿದೆ.

ಗಣೇಶ ಚತುರ್ಥಿಗೆ ಚಾಮರಾಜಪೇಟೆಯ ಈದ್ಗಾ ಮೈದಾನದ ಬಳಕೆಗೆ ಕೋರಿ ಬೆಂಗಳೂರು (ನಗರ) ಉಪ ಆಯುಕ್ತರು ಸ್ವೀಕರಿಸಿರುವ ಅರ್ಜಿಗಳಿಗೆ ಸಂಬಂಧಿಸಿದಂತೆ ಸೂಕ್ತ ಆದೇಶಗಳನ್ನು ನೀಡಲು ಕರ್ನಾಟಕ ಹೈಕೋರ್ಟ್‌ನ ವಿಭಾಗೀಯ ಪೀಠವು ಆಗಸ್ಟ್ 26ರಂದು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿತ್ತು.

ಇದನ್ನು ಪ್ರಶ್ನಿಸಿ ಕರ್ನಾಟಕ ವಕ್ಫ್ಮಂಡಳಿ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.