ADVERTISEMENT

ರಾಮಮಂದಿರ ನಿರ್ಮಾಣ ರ‍್ಯಾಲಿ: ಎರಡು ಸಮುದಾಯಗಳ ನಡುವೆ ಘರ್ಷಣೆ

ಪಿಟಿಐ
Published 18 ಜನವರಿ 2021, 10:31 IST
Last Updated 18 ಜನವರಿ 2021, 10:31 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಗಾಂಧಿಧಾಮ: ಗುಜರಾತ್‌ನ ಕಚ್‌ ಜಿಲ್ಲೆಯಲ್ಲಿ ನಡೆದ ರ‍್ಯಾಲಿಯೊಂದರಲ್ಲಿ ಎರಡು ಸಮುದಾಯಗಳ ನಡುವೆ ಸಂಘರ್ಷ ಏರ್ಪಟ್ಟಿದ್ದು, ಇದರಲ್ಲಿ ಮೂವರಿಗೆ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದರು.

‘ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಿಸಲುಭಾನುವಾರ ಸಂಜೆ ರ‍್ಯಾಲಿಯ ಮೂಲಕ ಹಣ ಸಂಗ್ರಹಿಸಲಾಗುತ್ತಿತ್ತು. ಈ ವೇಳೆ ಎರಡು ಸಮುದಾಯಗಳ ಸದಸ್ಯರ ನಡುವೆ ಸಂಘರ್ಷ ಏರ್ಪಟ್ಟಿದ್ದು, ಕಲ್ಲು ತೂರಾಟ ಕೂಡ ನಡೆಯಿತು ’ ಎಂದು ಗಾಂಧಿಧಾಮದ ಪೊಲೀಸ್‌ ಅಧಿಕಾರಿಯೊಬ್ಬರು ಹೇಳಿದರು.

‘ಈ ಸಂಘರ್ಷದ ವೇಳೆ ಕೆಲವೊಂದು ವಾಹನಗಳನ್ನು ಬೆಂಕಿ ಹಚ್ಚಿ, ಸುಡಲಾಗಿದೆ. ಘಟನೆಯಲ್ಲಿ ಗಾಯಗೊಂಡ ಮೂವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಅಧಿಕಾರಿಗಳು ತಿಳಿಸಿದರು.

ADVERTISEMENT

‘ಘಟನೆ ನಡೆದ 200 ಮೀಟರ್‌ ದೂರದಲ್ಲಿರುವ ಕಿದ್ನಾ ಗ್ರಾಮದಲ್ಲಿ ಶವವೊಂದು ಪತ್ತೆಯಾಗಿದೆ. ಈತ ಸಮುದಾಯಗಳ ನಡುವಿನ ಸಂಘರ್ಷಣೆಯಲ್ಲಿ ಮೃತಪಟ್ಟಿದ್ದಾನೆಯೇ ಎಂಬುದನ್ನು ಪತ್ತೆ ಹಚ್ಚಲಾಗುತ್ತಿದೆ’ ಎಂದು ಪೂರ್ವ ಕಚ್‌ನ ಪೊಲೀಸ್‌ ವರಿಷ್ಠಾಧಿಕಾರಿ ಮಯೂರ್‌ ಪಾಟೀಲ್‌ ಅವರು ಹೇಳಿದರು.

‘ಸಂತ್ರಸ್ಥ ಜಾರ್ಖಾಂಡ್‌ನಿಂದ ಆಟೊ ರಿಕ್ಷಾದ ಮೂಲಕ ಮನೆಗೆ ತೆರಳುತ್ತಿದ್ದ. ಈ ವೇಳೆ ಅಪರಿಚಿತ ವ್ಯಕ್ತಿಗಳು ಲಾಠಿಗಳ ಮೂಲಕ ಸಂತ್ರಸ್ಥನ ಮೇಲೆ ದಾಳಿ ನಡೆಸಿದ್ದಾರೆ. ಬಳಿಕ ಆತನಿಗೆ ಚೂರಿಯಿಂದ ಚುಚ್ಚಿದ್ದಾರೆ. ಈ ಸಂಬಂಧ ಎಫ್‌ಐಆರ್‌ ದಾಖಲಿಸಲಾಗಿದೆ’ ಎಂದು ಪಾಟೀಲ್‌ ಅವರು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.