ADVERTISEMENT

ಜೆಎನ್‌ಯುನಲ್ಲಿ ದುರ್ಗಾ ಪೂಜೆ, ರಾವಣ ದಹನ: ವಿದ್ಯಾರ್ಥಿ ಸಂಘಟನೆಗಳ ನಡುವೆ ಘರ್ಷಣೆ

ಏಜೆನ್ಸೀಸ್
Published 3 ಅಕ್ಟೋಬರ್ 2025, 7:33 IST
Last Updated 3 ಅಕ್ಟೋಬರ್ 2025, 7:33 IST
ಜೆಎನ್‌ಯು
ಜೆಎನ್‌ಯು   

ನವದೆಹಲಿ: ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ಕ್ಯಾಂಪಸ್ ಮತ್ತೊಮ್ಮೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಮತ್ತು ಎಡಪಂಥೀಯ ವಿದ್ಯಾರ್ಥಿ ಸಂಘಟನೆಗಳ ನಡುವೆ ಘರ್ಷಣೆ ನಡೆದಿದೆ.

ದುರ್ಗಾ ದೇವಿ ಮೆರವಣಿಗೆ ಮತ್ತು ರಾವಣ ದಹನ ಕಾರ್ಯಕ್ರಮದ ವೇಳೆ ಗುರುವಾರ ರಾತ್ರಿ ಘರ್ಷಣೆ ನಡೆದಿದ್ದು ಘಟನೆಯಲ್ಲಿ ಕೆಲ ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ.

ತಮ್ಮ ಧಾರ್ಮಿಕ ಮೆರವಣಿಗೆಯ ಮೇಲೆ ಎಡಪಂಥೀಯ ಸಂಘಟನೆಗಳು ಕಲ್ಲು ತೂರಾಟ ನಡೆಸಿವೆ ಎಂದು ಎಬಿವಿಪಿ ಆರೋಪಿಸಿದೆ. ಇದಕ್ಕೆ ಪ್ರತಿಯಾಗಿ, ರಾವಣನ ಪಾತ್ರದಲ್ಲಿ ಉಮರ್ ಖಾಲಿದ್ ಮತ್ತು ಶರ್ಜೀಲ್ ಇಮಾಮ್ ಅವರ ಪ್ರತಿಕೃತಿ ದಹಿಸುವ ಮೂಲಕ ಎಬಿವಿಪಿ ದ್ವೇಷದ ರಾಜಕೀಯ ಪ್ರಚಾರ ಮಾಡುತ್ತಿದೆ ಎಂದು ಎಡಪಂಥೀಯ ಸಂಘಟನೆಗಳು ಆರೋಪ ಮಾಡಿವೆ.

ADVERTISEMENT

ಈ ಘಟನೆಗೆ ಸಂಬಂಧಿಸಿದಂತೆ ಜೆಎನ್‌ಯು ಆಡಳಿತ ಮಂಡಳಿಯಿಂದ ಯಾವುದೇ ಅಧಿಕೃತ ಹೇಳಿಕೆ ಇನ್ನೂ ಪ್ರಕಟವಾಗಿಲ್ಲ. ಹಾಗೂ ಪೊಲೀಸ್‌ ಠಾಣೆಯಲ್ಲಿ ಯಾವುದೇ ದೂರು ದಾಖಲಾದ ಬಗ್ಗೆ ವರದಿಯಾಗಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.