ADVERTISEMENT

ಪಶ್ಚಿಮ ಬಂಗಾಳದಲ್ಲಿ 10 ಮತ್ತು 12 ನೇ ತರಗತಿಯ ಬೋರ್ಡ್‌ ಪರೀಕ್ಷೆಗಳಿಗೆ ತಡೆ

ಕೋವಿಡ್ ಹಿನ್ನೆಲೆಯಲ್ಲಿ ಈ ನಿರ್ಧಾರ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 7 ಜೂನ್ 2021, 10:32 IST
Last Updated 7 ಜೂನ್ 2021, 10:32 IST
ಸಾಂದರ್ಭಿಕ ಚಿತ್ರ, ಪಿಟಿಐ
ಸಾಂದರ್ಭಿಕ ಚಿತ್ರ, ಪಿಟಿಐ   

ಕೋಲ್ಕತ್ತಾ: ಕೋವಿಡ್ ಹಿನ್ನೆಲೆಯಲ್ಲಿ,ಪಶ್ಚಿಮ ಬಂಗಾಳದಲ್ಲಿ ಈ ಶೈಕ್ಷಣಿಕ ವರ್ಷದ 10 ಮತ್ತು 12 ನೇ ತರಗತಿಯ ಪರೀಕ್ಷೆಗಳನ್ನು ತಡೆ ಹಿಡಿಯಲಾಗಿದೆ.

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಟ್ವಿಟರ್‌ನಲ್ಲಿ ಈ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

‘ನಮ್ಮ ಮಕ್ಕಳ ಭವಿಷ್ಯ ನಮ್ಮ ಪ್ರಥಮ ಆದ್ಯತೆಯಾಗಿದೆ. ಈ ನಿಟ್ಟಿನಲ್ಲಿ ಜೂನ್‌ನಲ್ಲಿ ನಡೆಯಬೇಕಿದ್ದ 10 ಮತ್ತು 12 ನೇ ತರಗತಿಯ ಬೋರ್ಡ್‌ ಪರೀಕ್ಷೆಗಳನ್ನು ತಡೆ ಹಿಡಿಯಲಾಗುತ್ತಿದೆ. ಪರೀಕ್ಷೆ ನಡೆಸಬೇಕೋ ಬೇಡವೋ? ಎಂಬುದರ ಬಗ್ಗೆ ಪಾಲಕರು, ಶಿಕ್ಷಣ ತಜ್ಞರು, ನಾಗರಿಕರು, ವಿದ್ಯಾರ್ಥಿಗಳು ನಮಗೆ ಸಲಹೆ ನೀಡಬೇಕು‘ ಎಂದು ಮಮತಾ ಬ್ಯಾನರ್ಜಿ ಮನವಿ ಮಾಡಿ ಟ್ವೀಟ್ ಮಾಡಿದ್ದಾರೆ.

ADVERTISEMENT

ಪಶ್ಚಿಮ ಬಂಗಾಳದಲ್ಲಿ ಇದುವರೆಗೆ 14.3 ಲಕ್ಷ ಜನರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಅದರಲ್ಲಿ 16,259 ಜನ ಪ್ರಾಣ ಕಳೆದುಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.