ಅಹಮದಾಬಾದ್: ನಗರದ ಖಾಸಗಿ ಶಾಲೆಯೊಂದರ 10ನೇ ತರಗತಿಯ ವಿದ್ಯಾರ್ಥಿಯನ್ನು ಕ್ಷುಲ್ಲಕ ಕಾರಣಕ್ಕೆ 9ನೇ ತರಗತಿಯ ವಿದ್ಯಾರ್ಥಿ ಚಾಕುವಿನಿಂದ ಇರಿದು ಕೊಂದಿದ್ದಾನೆ.
ಇಬ್ಬರ ನಡುವೆ ಮಂಗಳವಾರ ಜಗಳವಾಗಿದೆ. ಈ ಸಂದರ್ಭ 9ನೇ ತರಗತಿಯ ವಿದ್ಯಾರ್ಥಿಯು ತನ್ನ ಹಿರಿಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದಿದ್ದಾನೆ. ಗಾಯಗೊಂಡವನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆತ ತಡರಾತ್ರಿ ಮೃತಪಟ್ಟಿದ್ದಾನೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ವಿದ್ಯಾರ್ಥಿಯ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ‘ಸೆವೆಂತ್ ಡೇ ಅಡ್ವೆನ್‌ಟಿಸ್ಟ್‘ ಶಾಲೆ ಬಳಿ ಜಮಾಯಿಸಿದ ಜನರು ಶಾಲಾವರಣದೊಳಗೆ ನುಗ್ಗಿ ಕೈಗೆ ಸಿಕ್ಕ ವಸ್ತುಗಳನ್ನು ಧ್ವಂಸಗೊಳಿಸಿದರು. ಸಿಬ್ಬಂದಿಯನ್ನು ಥಳಿಸಿದರು.
‘ವಿದ್ಯಾರ್ಥಿಯ ಕೊಲೆ ದುರದೃಷ್ಟಕರ. ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ತನಿಖೆ ನಡೆದಿದೆ’ ಎಂದು ಗುಜರಾತ್‌ನ ಶಿಕ್ಷಣ ಸಚಿವ ಪ್ರಫುಲ್ ಪನ್ಶೇರಿಯಾ ವಿಡಿಯೊ ಸಂದೇಶದಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.