ADVERTISEMENT

12ನೇ ತರಗತಿ ಪರೀಕ್ಷೆ ಫಲಿತಾಂಶ: ನಿಬಂಧನೆ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಪಿಟಿಐ
Published 7 ಜನವರಿ 2022, 16:27 IST
Last Updated 7 ಜನವರಿ 2022, 16:27 IST
ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್   

ನವದೆಹಲಿ: 12ನೇ ತರಗತಿಯ ಫಲಿತಾಂಶ ಪ್ರಕಟಿಸುವ ಸಂದರ್ಭದಲ್ಲಿ ಇತ್ತೀಚಿನ ಪರೀಕ್ಷೆಯಲ್ಲಿ ವಿದ್ಯಾರ್ಥಿ ಪಡೆದ ಅಂಕಗಳೇ ಅಂತಿಮ ಎಂಬುದಾಗಿ ಪರಿಗಣಿಸುವ ಸಿಬಿಎಸ್‌ಇ ವಿಧಿಸಿದ್ದ ನಿಬಂಧನೆಯನ್ನು ಸುಪ್ರೀಂಕೋರ್ಟ್‌ ಶುಕ್ರವಾರ ರದ್ದುಗೊಳಿಸಿತು.

ನ್ಯಾಯಮೂರ್ತಿಗಳಾದ ಎ.ಎಂ.ಖಾನ್ವೀಲ್ಕರ್ ಹಾಗೂ ಸಿ.ಟಿ.ರವಿಕುಮಾರ್‌ ಅವರಿರುವ ನ್ಯಾಯಪೀಠ ಅರ್ಜಿ ವಿಚಾರಣೆ ನಡೆಸಿತು.

‘ಅಂತಿಮ ಫಲಿತಾಂಶ ಘೋಷಣೆಗಾಗಿ, ಕಳೆದ ವರ್ಷ ನಡೆಸಿದ ಪರೀಕ್ಷೆಗಳಲ್ಲಿ ಆಯಾ ವಿಷಯದಲ್ಲಿ ಪಡೆದ ಅಂಕಗಳ ಪೈಕಿ ಅತ್ಯುತ್ತಮವಾದುದನ್ನು ಸ್ವೀಕರಿಸುವ ಆಯ್ಕೆಯನ್ನು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌ಇ) ವಿದ್ಯಾರ್ಥಿಗೆ ನೀಡಬೇಕು’ ಎಂದು ನ್ಯಾಯಪೀಠ ಹೇಳಿತು.

ADVERTISEMENT

ಕಳೆದ ವರ್ಷ ಜೂನ್‌ನಲ್ಲಿ ರೂಪಿಸಿದ್ದ ಮೌಲ್ಯಮಾಪನ ನೀತಿಯಲ್ಲಿ ಸಿಬಿಎಸ್‌ಇ ಈ ನಿಬಂಧನೆಯನ್ನು ಅಳವಡಿಸಿದೆ. ಇದನ್ನು ಪ್ರಶ್ನಿಸಿ ಕೆಲ ವಿದ್ಯಾರ್ಥಿಗಳು ಸುಪ್ರೀಂಕೋರ್ಟ್‌ ಮೊರೆ ಹೋಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.