ಬಂಧನ
(ಸಾಂದರ್ಭಿಕ ಚಿತ್ರ)
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆ ಹಾಕಿದ ಆರೋಪದಲ್ಲಿ 12ನೇ ತರಗತಿಯ ವಿದ್ಯಾರ್ಥಿಯನ್ನು ಬಂಧಿಸಲಾಗಿದೆ ಎಂದು ಮೂಲಗಳು ಶುಕ್ರವಾರ ತಿಳಿಸಿವೆ.
ಅಪ್ರಾಪ್ತ ವಯಸ್ಸಿನ 12ನೇ ತರಗತಿ ಬಾಲಕನನ್ನು ಬಂಧಿಸಲಾಗಿದೆ ಎಂದು ದಕ್ಷಿಣ ಜಿಲ್ಲೆಯ ಪೊಲೀಸರು ತಿಳಿಸಿದ್ದಾರೆ.
ಗುರುವಾರ ಕನಿಷ್ಠ 10 ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿದ್ದವು. ಕಳೆದ ವರ್ಷವೂ ಹೀಗೆ ಹಲವು ಬಾರಿ ಬೆದರಿಕೆಗಳು ಬಂದಿದ್ದವು. ಆದರೆ ಅವೆಲ್ಲವೂ ಹುಸಿ ಬೆದರಿಕೆಗಳಾಗಿದ್ದವು.
ಹೆಚ್ಚಿನ ಮಾಹಿತಿ ಹಂಚಿಕೊಳ್ಳಲು ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಪೊಲೀಸ್ ಪ್ರಧಾನ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿ ನಡೆಸಲಿರುವರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.