ನವದೆಹಲಿ: ‘ಆಗ್ನೇಯ ದೆಹಲಿಯ ಓಖಲಾ ಪ್ರದೇಶದಲ್ಲಿ ವಿದ್ಯಾರ್ಥಿ ಗುಂಪುಗಳ ನಡುವೆ ನಡೆದ ಜಗಳದಲ್ಲಿ 12ನೇ ತರಗತಿ ವಿದ್ಯಾರ್ಥಿಯೊಬ್ಬನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ’ ಎಂದು ಪೊಲೀಸರು ಮಂಗಳವಾರ ಹೇಳಿದ್ದಾರೆ.
‘ಮೃತಪಟ್ಟ ವಿದ್ಯಾರ್ಥಿಯು ಓಖಲಾದ 2ನೇ ಹಂತದ ಜೆಜೆ ಕ್ಯಾಂಪ್‌ನ ನಿವಾಸಿಯಾಗಿದ್ದು, ಕಾಲ್ಕಾಜಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ’ ಎಂದು ಅವರು ತಿಳಿಸಿದ್ದಾರೆ.
‘ಹಂಸ್‌ರಾಜ್ ಸೇಥಿ ಉದ್ಯಾನದ ಬಳಿ ಜಗಳ ನಡೆಯುತ್ತಿದ್ದ ವೇಳೆ ವಿದ್ಯಾರ್ಥಿಯ ಎದೆಗೆ ಚಾಕುವಿನಿಂದ ಇರಿಯಲಾಗಿತ್ತು. ಈ ಕುರಿತಂತೆ ಭಾರತೀಯ ದಂಡ ಸಂಹಿತೆ 302ರ (ಹತ್ಯೆ) ಅಡಿ ಪ್ರಕರಣ ದಾಖಲಿಸಲಾಗಿದೆ’ ಎಂದೂ ಅವರು ಹೇಳಿದ್ದಾರೆ.
‘ಘರ್ಷಣೆ ನಡೆದ ಸ್ಥಳದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗಿದ್ದು ದುಷ್ಕರ್ಮಿಗಳ ಪತ್ತೆಗಾಗಿ ತನಿಖೆ ನಡೆಸಲಾಗುತ್ತಿದೆ’ ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.