ಸಾವು
(ಪ್ರಾತಿನಿಧಿಕ ಚಿತ್ರ)
ಲಖನೌ: ಶಾಲಾ ಆವರಣದಲ್ಲಿ ಆಟವಾಡುತ್ತಿದ್ದ ಲಖನೌನ ಮೌಂಟ್‌ಫೋರ್ಟ್ ಶಾಲೆಯ 9 ವರ್ಷದ ಬಾಲಕಿಯೊಬ್ಬಳು ಹೃದಯ ಸ್ತಂಭನದಿಂದ ಮೃತಪಟ್ಟಿದ್ದಾಳೆ ಎಂದು ಶಾಲೆಯ ಪ್ರಾಂಶುಪಾಲರು ಶನಿವಾರ ತಿಳಿಸಿದ್ದಾರೆ.
ಗುರುವಾರ ಮೂರನೇ ತರಗತಿಯ ಮಾನ್ವಿ ಸಿಂಗ್ ಆಟದ ಮೈದಾನದಲ್ಲಿ ಪ್ರಜ್ಞಾಹೀನಳಾದ ಮಾಹಿತಿ ಬರುತ್ತಿದ್ದಂತೆ ಆಕೆಯನ್ನು ಹತ್ತಿರದ ಫಾತಿಮಾ ಆಸ್ಪತ್ರೆಗೆ ಸಾಗಿಸಲಾಯಿತು. ಬಳಿಕ ಬಾಲಕಿ ಕುಟುಂಬದವರು ಚಂದನ್ ಆಸ್ಪತ್ರೆಗೆ ಸಾಗಿಸಿದರು. ಆದರೆ, ವೈದ್ಯರು ಬಾಲಕಿಯು ಹೃದಯ ಸ್ತಂಭನದಿಂದ ಮೃತಪಟ್ಟಿರುವುದಾಗಿ ತಿಳಿಸಿದರು ಎಂದು ಶಾಲೆಯ ಪ್ರಾಂಶುಪಾಲರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಬಾಲಕಿಯ ಸಾವಿನ ಕಾರಣದಿಂದಾಗಿ ಶಾಲೆಗೆ ಶುಕ್ರವಾರ ರಜೆ ಘೋಷಿಸಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.