ADVERTISEMENT

ಮೊಬೈಲ್ ಬಳಸಬೇಡ ಎಂದಿದ್ದು ತಪ್ಪೇ?: ಶಿಕ್ಷಕರನ್ನು ಥಳಿಸಿದ 9ನೇ ತರಗತಿ ವಿದ್ಯಾರ್ಥಿ

ಪಿಟಿಐ
Published 28 ಅಕ್ಟೋಬರ್ 2021, 17:06 IST
Last Updated 28 ಅಕ್ಟೋಬರ್ 2021, 17:06 IST
ಸಾಂದರ್ಭಿಕ
ಸಾಂದರ್ಭಿಕ   

ಲಖನೌ: ತರಗತಿಯಲ್ಲಿ ಮೊಬೈಲ್ ಬಳಸಬೇಡ ಎಂದು ಶಿಕ್ಷಕರು ಬೈದಿದ್ದಕ್ಕೆ 9ನೇ ತರಗತಿ ವಿದ್ಯಾರ್ಥಿ ತನ್ನ ಇಬ್ಬರು ಸ್ನೇಹಿತರ ಜೊತೆ ತೆರಳಿ ಶಿಕ್ಷಕರ ಮೇಲೇ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಗೋರಖ್ ಪುರದಿಂದ ವರದಿಯಾಗಿದೆ.

ಗೋರಖ್‌ಪುರದ ಜುಬಿಲಿ ಇಂಟರ್ ಕಾಲೇಜ್ ಆವರಣದಲ್ಲಿ ಈ ಘಟನೆ ನಡೆದಿದ್ದು, ಕಪ್ಪು ಮುಖವಾಡಗಳನ್ನು ಧರಿಸಿದ್ದ ವಿದ್ಯಾರ್ಥಿಯು ತನ್ನ ಇಬ್ಬರು ಸ್ನೇಹಿತರೊಂದಿಗೆ ತೆರಳಿ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಕೊತ್ವಾಲಿ ಇನ್ಸ್‌ಪೆಕ್ಟರ್ ಕಲ್ಯಾಣ್ ಸಿಂಗ್ ಸಾಗರ್ ತಿಳಿಸಿದ್ದಾರೆ.

ಘಟನೆಯ ಸಂಪೂರ್ಣ ದೃಶ್ಯ ಶಾಲೆಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ ಎಂದು ಸಾಗರ್ ಹೇಳಿದ್ದಾರೆ, ಶಿಕ್ಷಕ ಸಯ್ಯದ್ ವಾಸಿಕ್ ಅಲಿ ಅವರ ದೂರಿನ ಮೇರೆಗೆ ಮೂವರ ವಿರುದ್ಧ ಕೊಲೆ ಯತ್ನದ ಪ್ರಕರಣವನ್ನು ದಾಖಲಿಸಲಾಗಿದೆ.

ಪ್ರಮುಖ ಆರೋಪಿ 9 ನೇ ತರಗತಿ ವಿದ್ಯಾರ್ಥಿಯನ್ನು ಬಂಧಿಸಿ ಮಕ್ಕಳ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ಬಳಿಕ ಬಾಲಾಪರಾಧಿ ಗೃಹಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಉಳಿದ ಇಬ್ಬರು ಆರೋಪಿಗಳನ್ನು ಗುರುತಿಸಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ ಎಂದು ಅವರು ಹೇಳಿದರು.

ಕೆಲವು ವಿದ್ಯಾರ್ಥಿಗಳು ಕಂಪ್ಯೂಟರ್ ಶಿಕ್ಷಕರ‌ನ್ನು ಥಳಿಸಿದ್ದಾರೆ ಎಂದು ಕಾಲೇಜು ಪ್ರಾಂಶುಪಾಲ ನಂದ ಪ್ರಸಾದ್ ಯಾದವ್ ಹೇಳಿದ್ದಾರೆ. 9 ನೇ ತರಗತಿಯ ವಿದ್ಯಾರ್ಥಿಯನ್ನು ಶಾಲೆಯಿಂದ ವಜಾಮಾಡಿದ್ದು, ಉಳಿದ ಇಬ್ಬರ ಗುರುತು ಪತ್ತೆ ಹಚ್ಚಲಾಗುತ್ತಿದೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.