ADVERTISEMENT

ರೂಪಾಂತರಗೊಂಡ ವೈರಸ್‌ ಮೇಲೆ ಕೋವ್ಯಾಕ್ಸಿನ್‌ ಪರಿಣಾಮಕಾರಿ: ಐಸಿಎಂಆರ್‌

ಪಿಟಿಐ
Published 19 ಫೆಬ್ರುವರಿ 2021, 8:07 IST
Last Updated 19 ಫೆಬ್ರುವರಿ 2021, 8:07 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ತಿರುವನಂತಪುರ: ‘ಬ್ರಿಟನ್, ದಕ್ಷಿಣ ಆಫ್ರಿಕಾ ಹಾಗೂ ಬ್ರೆಜಿಲ್‌ನಲ್ಲಿ ಪತ್ತೆಯಾಗಿರುವ ಕೊರೊನಾ ವೈರಸ್‌ನ ರೂಪಾಂತರ ತಳಿಗಳ ವಿರುದ್ಧ ಕೋವ್ಯಾಕ್ಸಿನ್‌ ಬಿಬಿ152 ಪರಿಣಾಮಕಾರಿಯಾಗುವ ಸಾಧ್ಯತೆಯಿದೆ ಎಂಬುದು ಕ್ಲಿನಿಕಲ್‌ ಟ್ರಯಲ್‌ನ ಮಧ್ಯಂತರ ವರದಿಯಲ್ಲಿ ತಿಳಿದುಬಂದಿದೆ’ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ (ಐಸಿಎಂಆರ್‌) ಪ್ರಧಾನ ನಿರ್ದೇಶಕ ಡಾ.ಬಲರಾಂ ಭಾರ್ಗವ್‌ ತಿಳಿಸಿದರು.

ಗುರುವಾರ ಕೇರಳದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯೋಜಿಸಿದ್ದ ಅಂತರರಾಷ್ಟ್ರೀಯ ವೆಬಿನಾರ್‌ ಉದ್ದೇಶಿಸಿ ಮಾತನಾಡಿದ ಅವರು,‘ ದಕ್ಷಿಣ ಆಫ್ರಿಕಾ ಮತ್ತು ಬ್ರೆಜಿಲ್‌ನಲ್ಲಿ ಪತ್ತೆಯಾದ ಕೊರೊನಾ ವೈರಸ್‌ನ ರೂಪಾಂತರ ತಳಿಗಳ ಮಾದರಿಯನ್ನು ಪ್ರಯಾಣಿಕರಿಂದ ಸಂಗ್ರಹಿಸಲಾಗಿದೆ. ಈಗಾಗಲೇ ಕೋವ್ಯಾಕ್ಸಿನ್‌ ಬಿಬಿ152 ಲಸಿಕೆಯ ಮೂರನೇ ಹಂತದ ಕ್ಲಿನಿಕಲ್‌ ಟ್ರಯಲ್‌ ನಡೆಸಲಾಗಿದೆ. ಇದರಲ್ಲಿ 25,800 ಸ್ವಯಂಸೇವಕರು ಭಾಗಿಯಾಗಿದ್ದರು. ಅವರಿಗೆ ಲಸಿಕೆಯ ಎರಡು ಡೋಸ್‌ಗಳನ್ನು ನೀಡಲಾಗಿತ್ತು’ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT