ADVERTISEMENT

ಉತ್ತರಾಖಂಡ: ಮೇಘಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆ

ಪಿಟಿಐ
Published 25 ಆಗಸ್ಟ್ 2022, 10:38 IST
Last Updated 25 ಆಗಸ್ಟ್ 2022, 10:38 IST
ಎನ್‌ಡಿಆರ್‌ಎಫ್ ಹಾಗೂ ಎಸ್‌ಡಿಆರ್‌ಎಫ್ ಸಿಬ್ಬಂದಿಯಿಂದ ರಕ್ಷಣಾ ಕಾರ್ಯ – ಪಿಟಿಐ ಚಿತ್ರ
ಎನ್‌ಡಿಆರ್‌ಎಫ್ ಹಾಗೂ ಎಸ್‌ಡಿಆರ್‌ಎಫ್ ಸಿಬ್ಬಂದಿಯಿಂದ ರಕ್ಷಣಾ ಕಾರ್ಯ – ಪಿಟಿಐ ಚಿತ್ರ   

ಡೆಹ್ರಾಡೂನ್: ಉತ್ತರಾಖಂಡದಲ್ಲಿ ಇತ್ತೀಚೆಗೆ ಸಂಭವಿಸಿದ ಮೇಘಸ್ಫೋಟದಿಂದ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.

ಬುಧವಾರ ಮೂರು ಮೃತದೇಹಗಳನ್ನು ಹೊರ ತೆಗೆಯಲಾಗಿತ್ತು. ಈ ಮಧ್ಯೆ, ಗಾಯಾಳುವೊಬ್ಬರು ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಹೀಗಾಗಿ ಸಾವಿನ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ ಎಂದು ವಿಪತ್ತು ನಿರ್ವಹಣಾ ಕೊಠಡಿಯ ಅಧಿಕಾರಿಗಳು ತಿಳಿಸಿದ್ದಾರೆ.

ಡೆಹ್ರಾಡೂನ್ ಮತ್ತು ತೆಹ್ರಿ ಜಿಲ್ಲೆಗಳಲ್ಲಿ ಕಳೆದ ವಾರ ಮೇಘಸ್ಫೋಟದಿಂದಾಗಿ ಐವರು ಮೃತಪಟ್ಟಿದ್ದರು. ಪೌರಿ ಜಿಲ್ಲೆಯಲ್ಲಿ ಒಬ್ಬರು ಮೃತಪಟ್ಟಿದ್ದರು.

ADVERTISEMENT

ಎಂಟು ಮಂದಿ ಇನ್ನೂ ನಾಪತ್ತೆಯಾಗಿದ್ದಾರೆ. ಈ ಪೈಕಿ ತಲಾ ನಾಲ್ವರು ಡೆಹ್ರಾಡೂನ್ ಹಾಗೂ ತೆಹ್ರಿ ಜಿಲ್ಲೆಗಳ ಜನರಾಗಿದ್ದಾರೆ. ಇವರ ಪತ್ತೆಗಾಗಿ ಕಾರ್ಯಾಚರಣೆ ನಡೆಯುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.