ADVERTISEMENT

ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ: ಕನಿಷ್ಠ ನಾಲ್ವರು ಕೊಚ್ಚಿ ಹೋಗಿರುವ ಶಂಕೆ

ಪಿಟಿಐ
Published 6 ಜುಲೈ 2022, 7:16 IST
Last Updated 6 ಜುಲೈ 2022, 7:16 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಶಿಮ್ಲಾ: ಹಿಮಾಚಲ ಪ್ರದೇಶದ ಕುಲ್ಲು ಜಿಲ್ಲೆಯಲ್ಲಿ ಬುಧವಾರ ಮೇಘಸ್ಫೋಟ ಸಂಭವಿಸಿದೆ. ಇದರಿಂದ ಉಂಟಾದ ಹಠಾತ್ ಪ್ರವಾಹದಲ್ಲಿ ಕನಿಷ್ಠ ನಾಲ್ವರು ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕುಲ್ಲು ಜಿಲ್ಲೆಯ ಚಲ್ಲಾಲ್ ಪಂಚಾಯತ್‌ನ ಚೋಜ್ ಗ್ರಾಮದಲ್ಲಿ ಬೆಳಿಗ್ಗೆ 6 ಗಂಟೆ ಸುಮಾರಿಗೆ ಅವಘಡ ಉಂಟಾಗಿದೆ. ಇದರಲ್ಲಿ ನಾಲ್ಕರಿಂದ ಆರು ಮಂದಿ ನಾಪತ್ತೆಯಾಗಿರಬಹುದು ಎಂದು ರಾಜ್ಯ ವಿಪತ್ತು ನಿರ್ವಹಣಾ ನಿರ್ದೇಶಕ ಸುದೇಶ್ ಮೊಖ್ತಾ ತಿಳಿಸಿದ್ದಾರೆ.

ಪ್ರಾಥಮಿಕ ವರದಿಗಳ ಪ್ರಕಾರ ನಾಲ್ವರು ನಾಪತ್ತೆಯಾಗಿದ್ದಾರೆ. ಶೋಧ ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಕುಲ್ಲು ಪೊಲೀಸ್ ವರಿಷ್ಠಾಧಿಕಾರಿ ಗುರುದೇವ್ ಶರ್ಮಾ ತಿಳಿಸಿದ್ದಾರೆ.

ADVERTISEMENT

ಪಾರ್ವತಿ ನದಿಗೆ ಅಡ್ಡಲಾಗಿರುವ ಸೇತುವೆಗೆ ಹಾನಿಯಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.