ADVERTISEMENT

ಆಲಮಟ್ಟಿಯಿಂದ ನೀರು ಬಿಡುವಂತೆ ಯಡಿಯೂರಪ್ಪಗೆ ಮನವಿ ಮಾಡಿದ ಮಹಾರಾಷ್ಟ್ರ ಸಿಎಂ

​ಪ್ರಜಾವಾಣಿ ವಾರ್ತೆ
Published 6 ಆಗಸ್ಟ್ 2019, 9:14 IST
Last Updated 6 ಆಗಸ್ಟ್ 2019, 9:14 IST
   

ಮುಂಬೈ: ಮಹಾ ಮಳೆಗೆ ತತ್ತರಿಸಿರುವ ಮಹಾರಾಷ್ಟ್ರದಲ್ಲಿ ಪ್ರವಾಹ ಉಂಟಾಗಿದ್ದು ಅಲಮಟ್ಟಿ ಅಣೆಕಟ್ಟೆಯಿಂದ ನೀರು ಬಿಡುಗಡೆ ಮಾಡುವಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್‌ ಅವರು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಲ್ಲಿ ಮನವಿ ಮಾಡಿದ್ದಾರೆ.

ಕೊಲ್ಲಾಪುರ, ಸಾಂಗ್ಲಿ, ಸತಾರ್‌ ಸೇರಿದಂತೆ ಪಶ್ಚಿಮ ಮಹಾರಾಷ್ಟ್ರದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಮಂಗಳವಾರ ಪ್ರವಾಹ ಪರಿಸ್ಥಿತಿ ವೀಕ್ಷಣೆ ಮಾಡುತ್ತಿರುವ ಅವರು ಯಡಿಯೂರಪ್ಪ ಅವರಿಗೆ ದೂರವಾಣಿ ಕರೆ ಮಾಡಿ ಅಲಮಟ್ಟಿ ಅಣೆಕಟ್ಟೆಯಿಂದ ನೀರು ಬಿಡುವಂತೆ ಮನವಿ ಮಾಡಿದ್ದಾರೆ. ಇದಕ್ಕೆ ಯಡಿಯೂರಪ್ಪ ಅವರು ಪೂರಕವಾಗಿ ಸ್ಪಂದಿಸಿದ್ದಾರೆ ಎಂದು ಮಹಾರಾಷ್ಟ್ರ ಸರ್ಕಾರ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ಕರ್ನಾಟಕ ಹಾಗೂ ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿನ ಪ್ರವಾಹ ಪರಿಸ್ಥಿಯ ಬಗ್ಗೆ ದೇವೇಂದ್ರ ಫಡಣವೀಸ್‌ ಹಾಗೂ ಯಡಿಯೂರಪ್ಪ ಚರ್ಚೆ ಮಾಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.