ಮಹಾರಾಷ್ಟ್ರ: ವಿಶೇಷ ಅಧಿವೇಶನ
(ಪಿಟಿಐ ಚಿತ್ರ)
ಮುಂಬೈ: ಮಹಾರಾಷ್ಟ್ರ ವಿಧಾನಸಭೆಯ ಮೂರು ದಿನಗಳ ವಿಶೇಷ ಅಧಿವೇಶನ ಇಂದು (ಶನಿವಾರ) ಆರಂಭವಾಗಿದೆ.
ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್, ಉಪಮುಖ್ಯಮಂತ್ರಿಗಳಾದ ಏಕನಾಥ ಶಿಂದೆ ಹಾಗೂ ಅಜಿತ್ ಪವಾರ್ ಸೇರಿದಂತೆ ಹಲವರು ವಿಧಾನಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಹಂಗಾಮಿ ಸ್ಪೀಕರ್ ಕಾಳಿದಾಸ್ ಕೊಲಂಬ್ಕರ್ ಅವರು ನೂತನವಾಗಿ ಆಯ್ಕೆಯಾಗಿರುವ 287 ಶಾಸಕರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ.
288 ಸದಸ್ಯ ಬಲದ ಮಹಾರಾಷ್ಟ್ರದಲ್ಲಿ ನವೆಂಬರ್ 20ರಂದು ಏಕಕಾಲದಲ್ಲಿ ಮತದಾನ ನಡೆದಿತ್ತು. ಬಳಿಕ ನವೆಂಬರ್ 23ರಂದು ಫಲಿತಾಂಶ ಘೋಷಣೆಯಾಗಿತ್ತು.
ಬಿಜೆಪಿ, ಶಿವ ಸೇನಾ (ಶಿಂದೆ ಬಣ), ಎನ್‌ಸಿಪಿ (ಅಜಿತ್ ಪವಾರ್ ಬಣ) ಒಳಗೊಂಡ ಮಹಾಯುತಿ ಮೈತ್ರಿಕೂಟವು 230 ಸ್ಥಾನಗಳಲ್ಲಿ ಗೆದ್ದು ಪ್ರಚಂಡ ಬಹುಮತ ಪಡೆದಿತ್ತು.
ಡಿಸೆಂಬರ್ 5ರಂದು ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡಣವೀಸ್, ಉಪಮುಖ್ಯಮಂತ್ರಿಗಳಾಗಿ ಏಕನಾಥ ಶಿಂದೆ ಹಾಗೂ ಅಜಿತ್ ಪವಾರ್ ಪ್ರಮಾಣ ವಚನ ಸ್ವೀಕರಿಸಿದ್ದರು.
ಮೂರು ದಿನಗಳ ವಿಶೇಷ ಅಧಿವೇಶನ ಡಿಸೆಂಬರ್ 9ರವರೆಗೆ ನಡೆಯಲಿದೆ. ಸಂಪುಟ ವಿಸ್ತರಣೆ ಡಿಸೆಂಬರ್ 11 ಅಥವಾ 12ರಂದು ನಡೆಯುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.