ರಾಂಚಿ(ಜಾರ್ಖಂಡ್): ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರು ಜಾರ್ಖಂಡ್ ವಿಧಾನಸಭೆಯ ಸದಸ್ಯರಾಗಿ ಇಂದು (ಸೋಮವಾರ) ಪ್ರಮಾಣ ವಚನ ಸ್ವೀಕರಿಸಿದರು.
ಇವರೊಂದಿಗೆ ಸಂಸದೀಯ ವ್ಯವಹಾರಗಳ ಸಚಿವ ರಾಧಾಕೃಷ್ಣ ಕಿಶೋರ್, ಕಂದಾಯ ಮತ್ತು ಭೂ ಸುಧಾರಣಾ ಸಚಿವ ದೀಪಕ್ ಬಿರುವಾ ಮತ್ತು ಕಾರ್ಮಿಕ ಸಚಿವ ಸಂಜಯ್ ಪ್ರಸಾದ್ ಯಾದವ್ ಅವರು ಕೂಡ ವಿಧಾನಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಬೆಳಗ್ಗೆ 11 ಗಂಟೆಗೆ ಸದನದ ಕಲಾಪ ಆರಂಭವಾದ ಬೆನ್ನಲ್ಲೇ ವಿಧಾನಸಭೆಯ ಹಂಗಾಮಿ ಸ್ಪೀಕರ್ ಸ್ಟೀಫನ್ ಮರಾಂಡಿ ಅವರು ಮುಖ್ಯಮಂತ್ರಿ ಹಾಗೂ ಸಚಿವರಿಗೆ ಪ್ರಮಾಣ ವಚನ ಬೋಧಿಸಿದರು .
ಸದನದ ಎಲ್ಲಾ 81 ಸದಸ್ಯರು ಸೋಮವಾರ ಜಾರ್ಖಂಡ್ ವಿಧಾನಸಭೆಯ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅಧಿವೇಶನದಲ್ಲಿ ಸ್ಪೀಕರ್ ಆಯ್ಕೆ, ರಾಜ್ಯಪಾಲರ ಭಾಷಣ, ಎರಡನೇ ಪೂರಕ ಬಜೆಟ್ ಮಂಡನೆ ಮತ್ತು ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಯೂ ನಡೆಯಲಿದೆ ಎಂದು ವಿಧಾನಸಭೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಜಾರ್ಖಂಡ್‌ನ 14 ನೇ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೇನ್ ನವೆಂಬರ್ 28 ರಂದು ಪ್ರಮಾಣ ವಚನ ಸ್ವೀಕರಿಸಿದ್ದರು. ಬಳಿಕ ಡಿಸೆಂಬರ್ 5 ರಂದು 11 ಶಾಸಕರು ರಾಜ್ಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.