ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಮತ್ತು ಒಮರ್ ಅಬ್ಧುಲ್ಲಾ
ಜಮ್ಮು: ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಮತ್ತು ಅವರ ತಂದೆ ಫಾರೂಕ್ ಅಬ್ದುಲ್ಲಾ ಅವರು ವಂದೇ ಭಾರತ್ ರೈಲಿನಲ್ಲಿ ಕಟ್ರಾಗೆ ಪ್ರಯಾಣಿಸಿದರು.
ಕಟ್ರಾದಲ್ಲಿ ನಡೆಯುತ್ತಿರುವ ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ರಾಷ್ಟ್ರೀಯ ಸಮ್ಮೇಳನದಲ್ಲಿ ಅವರು ಭಾಗವಹಿಸಲು ಆಗಮಿಸಿದರು. ಅವರನ್ನು ಪಕ್ಷದ ನಾಯಕರು ಮತ್ತು ಕಾರ್ಯಕರ್ತರು ಸ್ವಾಗತಿಸಿದರು.
ಒಮರ್ ಅಬ್ದುಲ್ಲಾ, ಫಾರೂಕ್ ಅಬ್ದುಲ್ಲಾ ಹಾಗೂ ಪಕ್ಷದ ಸಲಹೆಗಾರ ಅಸ್ಲಂ ವಾನಿ ಅವರೊಂದಿಗೆ ಬೆಳಗ್ಗೆ 9 ಗಂಟೆಗೆ ಕಟ್ರಾ ರೈಲು ನಿಲ್ದಾಣಕ್ಕೆ ಆಗಮಿಸಿದರು.
ಕಳೆದ ಜೂನ್ 10 ರಂದು, ಫಾರೂಕ್ ಅಬ್ದುಲ್ಲಾ ಅವರು ಶ್ರೀನಗರದಿಂದ ಕಟ್ರಾಗೆ ರೈಲಿನಲ್ಲಿ ತಮ್ಮ ಮೊದಲ ಪ್ರಯಾಣ ಮಾಡಿದರು. ಕಾಶ್ಮೀರ ಅಂತಿಮವಾಗಿ ದೇಶದ ರೈಲು ಜಾಲಕ್ಕೆ ಸಂಪರ್ಕಗೊಂಡಿರುವುದು ನನಗೆ ಸಂತೋಷವಾಗಿದೆ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.