ADVERTISEMENT

ಪಾಕ್‌ಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದ ಸ್ನೇಹಾ ದುಬೆ; ಅಭಿನಂದಿಸಿದ ಗೋವಾ ಸಿಎಂ

ಪಿಟಿಐ
Published 26 ಸೆಪ್ಟೆಂಬರ್ 2021, 11:05 IST
Last Updated 26 ಸೆಪ್ಟೆಂಬರ್ 2021, 11:05 IST
ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್
ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್   

ಪಣಜಿ: ಪಾಕಿಸ್ತಾನದ ಪ್ರಧಾನಿ ಇಮ್ರಾನ್‌ ಖಾನ್‌ ವಿಶ್ವಸಂಸ್ಥೆಯ ಸಾಮಾನ್ಯ ಅಧಿವೇಶನದ ತಮ್ಮ ಭಾಷಣದಲ್ಲಿ ಕಾಶ್ಮೀರ ವಿಷಯವನ್ನು ಪ್ರಸ್ತಾಪಿಸಿದ್ದಕ್ಕೆ ತೀಕ್ಷ್ಣ ತಿರುಗೇಟು ನೀಡುವ ಮೂಲಕ ಎಲ್ಲರ ಮನ ಗೆದ್ದಿರುವ ಭಾರತದ ಕಾರ್ಯದರ್ಶಿ ಸ್ನೇಹಾ ದುಬೆಯವರನ್ನು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅಭಿನಂದಿಸಿದ್ದಾರೆ.

ಗೋವಾದಲ್ಲಿ ಶಾಲಾ ಶಿಕ್ಷಣವನ್ನು ಪೂರೈಸಿರುವ ಸ್ನೇಹಾ ಅವರು ಬದುಕಿಗೆ ಬಲವಾದ ಅಡಿಪಾಯವನ್ನು ಬೆಳೆಸಿಕೊಂಡಿರುವುದಾಗಿ ಪ್ರಶಂಸಿಸಿದ್ದಾರೆ.

2012ರ ಬ್ಯಾಚ್‌ನ ಭಾರತೀಯ ವಿದೇಶಾಂಗ ಸೇವೆ (ಐಎಫ್‌ಎಸ್‌) ಅಧಿಕಾರಿ ಸ್ನೇಹಾ ದುಬೆ ಅವರು ಶುಕ್ರವಾರ ವಿಶ್ವಸಂಸ್ಥೆಯ ಸಾಮಾನ್ಯ ಅಧಿವೇಶನದ ತಮ್ಮ ಭಾಷಣದಲ್ಲಿ ನೇರವಾಗಿ ಪಾಕಿಸ್ತಾನದ ಹೆಸರನ್ನು ಪ್ರಸ್ತಾಪಿಸಿದ್ದರು. ಈ ಮೂಲಕ ಕಳೆದ ಕೆಲವು ವರ್ಷಗಳಿಂದ ಯುವ ಭಾರತೀಯ ರಾಜತಾಂತ್ರಿಕರು ಪಾಕಿಸ್ತಾನದ ನಾಯಕರನ್ನು ತರಾಟೆಗೆ ತೆಗೆದುಕೊಳ್ಳುವ ಸಂಪ್ರದಾಯವನ್ನು ಮುಂದುವರೆಸಿದ್ದರು.

ADVERTISEMENT

ಈ ಕುರಿತು ಟ್ವೀಟ್ ಮಾಡಿರುವ ಸಾವಂತ್, 'ಯುಎನ್‌ಜಿಎನಲ್ಲಿ ಭಾರತವನ್ನು ಪ್ರತಿನಿಧಿಸಿದ ಮತ್ತು ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ ಐಎಫ್ಎಸ್ ಅಧಿಕಾರಿ ಸ್ನೇಹಾ ದುಬೆ ಅವರನ್ನು ಇಡೀ ಗೋವಾ ರಾಜ್ಯದ ಪರವಾಗಿ ನಾನು ಅಭಿನಂದಿಸಲು ಬಯಸುತ್ತೇನೆ. ಆಕೆ ಗೋವಾದಲ್ಲಿ ತನ್ನ ಶಾಲಾ ಶಿಕ್ಷಣವನ್ನು ಮುಗಿಸಿ ಬಲಶಾಲಿಯಾಗಿದ್ದಾರೆ ಮತ್ತು ಬಲಿಷ್ಠ ಜೀವನಕ್ಕೆ ಅಡಿಪಾಯ ಹಾಕಿಕೊಂಡಿದ್ದಾರೆ' ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.