
ಪ್ರಜಾವಾಣಿ ವಾರ್ತೆ
ಸಂಗ್ರಹ ಚಿತ್ರ
ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಇಲ್ಲಿ ಬುಧವಾರ ಭೇಟಿ ಮಾಡಲಿದ್ದಾರೆ.
ಕರ್ನಾಟಕ ವಿಧಾನ ಪರಿಷತ್ತಿಗೆ ನಡೆಯಲಿರುವ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುವ ಸಂಬಂಧ ಅವರು ಮಾತುಕತೆ ನಡೆಸುವರು ಎಂದು ಮೂಲಗಳು ಹೇಳಿವೆ.
ಮಂಗಳವಾರ ಇಲ್ಲಿಗೆ ಬಂದಿಳಿದ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್, ಪಕ್ಷದ ರಾಜ್ಯ ಉಸ್ತುವಾರಿಯೂ ಆದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲಾ ಅವರೊಂದಿಗೆ ಮಾತುಕತೆ ನಡೆಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.