ADVERTISEMENT

ಮಹಾರಾಷ್ಟ್ರ | ಲಾಕ್‌ಡೌನ್‌ 2 ದಿನದಲ್ಲಿ ನಿರ್ಧಾರ: ಸಿಎಂ ಉದ್ಧವ್ ಠಾಕ್ರೆ

​ಪ್ರಜಾವಾಣಿ ವಾರ್ತೆ
Published 2 ಏಪ್ರಿಲ್ 2021, 18:52 IST
Last Updated 2 ಏಪ್ರಿಲ್ 2021, 18:52 IST
ಉದ್ಧವ್ ಠಾಕ್ರೆ (ಪಿಟಿಐ ಸಂಗ್ರಹ ಚಿತ್ರ)
ಉದ್ಧವ್ ಠಾಕ್ರೆ (ಪಿಟಿಐ ಸಂಗ್ರಹ ಚಿತ್ರ)   

ಮುಂಬೈ: ಮಹಾರಾಷ್ಟ್ರದಲ್ಲಿ ಕೋವಿಡ್ ಸೋಂಕು ಪ್ರಕರಣಗಳ ಸಂಖ್ಯೆ ನಿತ್ಯ 50 ಸಾವಿರದ ಸಂಖ್ಯೆ ದಾಟುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸಂಪೂರ್ಣ ಲಾಕ್ ಡೌನ್ ಜಾರಿಗೊಳಿಸುವ ಕುರಿತು ಎರಡು ದಿನದಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ತಿಳಿಸಿದ್ದಾರೆ.

ರಾಜ್ಯವನ್ನು ಉದ್ದೇಶಿಸಿ ಮಾಡಿದ ಭಾಷಣದಲ್ಲಿ ಅವರು ಕೋವಿಡ್‌ ಸೋಂಕನ್ನು ಮಾಯಾವಿ ರಾಕ್ಷಸ ಎಂದು ಬಣ್ಣಿಸಿದರು. ಕೋವಿಡ್‌ ಪರಿಸ್ಥಿತಿ ಎದುರಿಸಲು ಸರ್ಕಾರ ಕಾರ್ಯಸೂಚಿಯನ್ನು ಸಿದ್ಧಪಡಿಸುತ್ತಿದೆ. ಜನರೂ ಅದಕ್ಕೆ ಪೂರಕವಾಗಿ ಸ್ಪಂದಿಸಬೇಕು ಎಂದು ಕೋರಿದರು.

ಮುಂದಿನ ಎರಡು ದಿನ ಪರಿಸ್ಥಿತಿಯನ್ನು ಗಮನಿಸಲಿದ್ದೇವೆ. ಜನರೂ ಕೂಡಾ ಎಚ್ಚರಿಕೆಯಿಂದ ಇದ್ದು ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಲಾಕ್ ಡೌನ್ ಜಾರಿಗೊಳಿಸುವ ಸಾಧ್ಯತೆಗಳನ್ನು ನಾನು ತಳ್ಳಿಹಾಕುವುದಿಲ್ಲ. ಎರಡು ದಿನದಲ್ಲಿ ತೀರ್ಮಾನ ಪ್ರಕಟಿಸುತ್ತೇವೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.