ADVERTISEMENT

ಮಣಿಪುರ ರಾಜ್ಯೋತ್ಸವ: ರಾಜ್ಯದ ಘನತೆ ಎತ್ತಿ ಹಿಡಿಯುವಂತೆ ಸಿಎಂ ಬಿರೇನ್ ಸಿಂಗ್ ಮನವಿ

ಪಿಟಿಐ
Published 21 ಜನವರಿ 2025, 6:50 IST
Last Updated 21 ಜನವರಿ 2025, 6:50 IST
ಬಿರೇನ್ ಸಿಂಗ್
ಬಿರೇನ್ ಸಿಂಗ್   

ಇಂಫಾಲ: ಇಂದು ಮಣಿಪುರ ರಾಜ್ಯೋತ್ಸವ. ಈ ಸಂದರ್ಭದಲ್ಲಿ ರಾಜ್ಯದ ಘನತೆಯನ್ನು ಎತ್ತಿ ಹಿಡಿಯುವಂತೆ ಮುಖ್ಯಮಂತ್ರಿ ಎನ್.ಬಿರೇನ್ ಸಿಂಗ್ ಅವರು ಜನರಲ್ಲಿ ಮನವಿ ಮಾಡಿದ್ದಾರೆ.

'1972ರ ಜನವರಿ 21 ರಂದು ಮಣಿಪುರ ರಾಜ್ಯ ರಚನೆಯಾಯಿತು. ಇದು ನಮ್ಮ ಇತಿಹಾಸದಲ್ಲಿ ಮಹತ್ವದ ಮೈಲಿಗಲ್ಲು. ಈ ಮಹತ್ವದ ದಿನದಂದು, ನಮ್ಮ ರಾಜ್ಯದ ಹೆಮ್ಮೆ ಮತ್ತು ಘನತೆಯನ್ನು ಎತ್ತಿ ಹಿಡಿಯಲು ಒಟ್ಟಾಗಿ ಕೆಲಸ ಮಾಡಲು ಪ್ರತಿಜ್ಞೆ ಮಾಡೋಣ' ಎಂದು ಸಿಎಂ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಪ್ರಧಾನಿಗೆ ಧನ್ಯವಾದ ಹೇಳಿದ ಸಿಎಂ

ಮಣಿಪುರ ರಾಜ್ಯೋತ್ಸವ ದಿನದಂದು ಶುಭ ಹಾರೈಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಿರೇನ್ ಸಿಂಗ್ ಧನ್ಯವಾದ ಹೇಳಿದ್ದಾರೆ. 'ರಾಜ್ಯೋತ್ಸವ ದಿನದಂದು ಪ್ರಧಾನಿ ಮೋದಿ ಅವರಿಗೆ ಮಣಿಪುರದ ಜನತೆಯ ಪರವಾಗಿ ನನ್ನ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ನಿಮ್ಮ ಮಾತುಗಳು ಮಣಿಪುರದ ಉಜ್ವಲ ಭವಿಷ್ಯಕ್ಕಾಗಿ ಶ್ರಮಿಸಲು ನಮಗೆ ಸ್ಫೂರ್ತಿ ನೀಡುತ್ತವೆ. ನಿಮ್ಮ ಪ್ರೋತ್ಸಾಹ ಮತ್ತು ಬೆಂಬಲಕ್ಕಾಗಿ ಧನ್ಯವಾದಗಳು' ಎಂದು ಸಿಎಂ ಹೇಳಿದ್ದಾರೆ.

ADVERTISEMENT

ಮೇ 2023ರ ರಿಂದ ಜನಾಂಗೀಯ ಹಿಂಸಾಚಾರಕ್ಕೆ ಸಾಕ್ಷಿಯಾಗಿರುವ ಮಣಿಪುರದಲ್ಲಿ ಈವರೆಗೆ 250ಕ್ಕೂ ಹೆಚ್ಚು ಜನ ಮೃತಪಟಿದ್ದಾರೆ. ಸಾವಿರಾರು ಮಂದಿ ನಿರಾಶ್ರಿತರಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.