ಚೆನ್ನೈ: ‘ಜನಸಂಖ್ಯೆ ಆಧಾರದ ಮೇಲೆ ಲೋಕಸಭಾ ಕ್ಷೇತ್ರಗಳ ಪುನರ್ ವಿಂಗಡಣೆಯು ಕೆಲವು ರಾಜ್ಯಗಳನ್ನು ದುರ್ಬಲಗೊಳಿಸುವ ಯತ್ನದ ಭಾಗವೇ ಆಗಿದೆ’ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಶುಕ್ರವಾರ ಟೀಕಿಸಿದ್ದಾರೆ.
ಈ ನಿಟ್ಟಿನಲ್ಲಿ ಜಂಟಿ ಕ್ರಿಯಾ ಸಮಿತಿಯ (ಜೆಎಸಿ) ಮೊದಲ ಸಭೆ ಶನಿವಾರ ನಡೆಯಲಿದ್ದು, ಇದು ದೇಶದ ಭವಿಷ್ಯ ರೂಪಿಸಲಿರುವ ಆರಂಭಿಕ ಚಳವಳಿಯಾಗಲಿದೆ ಎಂದು ಅವರು ಬಿಡುಗಡೆ ಮಾಡಿದ ವಿಡಿಯೊದಲ್ಲಿ ತಿಳಿಸಿದ್ದಾರೆ.
ಜನಸಂಖ್ಯೆ ಬೆಳವಣಿಗೆಯನ್ನು ಸಮರ್ಥವಾಗಿ ನಿಯಂತ್ರಿಸುವ ಮೂಲಕ ರಾಷ್ಟ್ರದ ಅಭಿವೃದ್ಧಿಗೆ ಗಣನೀಯ ಕೊಡುಗೆ ನೀಡಿದ ರಾಜ್ಯಗಳನ್ನು ಕೇಂದ್ರ ಸರ್ಕಾರ ಶಿಕ್ಷಿಸಬಾರದು ಎಂದು ಹೇಳಿದ್ದಾರೆ.
‘ಕರ್ನಾಟಕ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ, ಪಂಜಾಬ್‌ನ ಭಗವಂತ ಮಾನ್, ಕೇರಳದ ಪಿಣರಾಯಿ ವಿಜಯನ್ ಅವರು ಭಾಗಿಯಾಗಲಿರುವ ಶನಿವಾರದ ಸಭೆಯಲ್ಲಿ ಮುಂದಿನ ನಿರ್ಧಾರದ ಕುರಿತು ರೂಪುರೇಷೆ ರೂಪಿಸಲಾಗುವುದು. ಸಭೆ ತೆಗೆದುಕೊಳ್ಳುವ ನಿರ್ಧಾರದ ಪ್ರಕಾರ ನಾವು ಮುಂದಿನ ಕ್ರಮ ಕೈಗೊಳ್ಳಲಿದ್ದೇವೆ. ನ್ಯಾಯಯುತವಾದ ನಮ್ಮ ಬೇಡಿಕೆಗೆ ಜಯ ಸಿಗಲಿದೆ. ನಮ್ಮ ಈ ಹೋರಾಟವು ಭಾರತವನ್ನು ರಕ್ಷಿಸಲಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.