ರಾಜಸ್ಥಾನ ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾ ಮತ್ತು ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್
ಪಿಟಿಐ ಚಿತ್ರ
ಮಹಾಕುಂಭನಗರ (ಉತ್ತರ ಪ್ರದೇಶ): ಪ್ರಯಾಗ್‌ರಾಜ್‌ನ ತ್ರಿವೇಣಿ ಸಂಗಮದಲ್ಲಿ ರಾಜಸ್ಥಾನ ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾ ಮತ್ತು ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಅವರು ಶನಿವಾರ ಪವಿತ್ರ ಸ್ನಾನ ಮಾಡಿದ್ದಾರೆ.
ರಾಜಸ್ಥಾನ ಸರ್ಕಾರದ ಹಲವು ಸಚಿವರು ಕೂಡ ಸಂಗಮದಲ್ಲಿ ಮಿಂದೆದ್ದಿದ್ದಾರೆ.
‘ಮಹಾಕುಂಭಮೇಳವು ಭಾರತದ ಶ್ರೀಮಂತ ಸಾಂಸ್ಕೃತಿಕ ಮತ್ತು ಆಧ್ಯಾತಿಕ ಪರಂಪರೆಯ ಸಂಕೇತವಾಗಿದೆ. ಇದು ಕೇವಲ ಧಾರ್ಮಿಕ ಕಾರ್ಯಕ್ರಮವಲ್ಲ. ಇದು ನಮ್ಮ ಪರಂಪರೆಯ ಪ್ರಾತಿನಿಧ್ಯವಾಗಿದೆ. ನಾವು ಇದರ ಭಾಗವಾಗಲು ಅದೃಷ್ಟಶಾಲಿಗಳಾಗಿದ್ದೇವೆ’ ಎಂದು ಭಜನ್‌ಲಾಲ್ ಶರ್ಮಾ ಬಣ್ಣಿಸಿದ್ದಾರೆ.
ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಗೆಲುವಿನ ಕುರಿತು ಪ್ರತಿಕ್ರಿಯಿಸಿದ ಶರ್ಮಾ, ‘ದೇಶದ ಜನರು ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ಅಚಲ ನಂಬಿಕೆಯನ್ನು ಹೊಂದಿದ್ದಾರೆ. ದೆಹಲಿಯ ಜನರು ತಮ್ಮ ಅಭಿವೃದ್ಧಿಗಾಗಿ ‘ಡಬಲ್ ಎಂಜಿನ್’ ಸರ್ಕಾರವನ್ನು ಆಯ್ಕೆ ಮಾಡಿದ್ದಾರೆ’ ಎಂದು ಹೇಳಿದ್ದಾರೆ.
ಪ್ರಯಾಗ್‌ರಾಜ್‌ನ ಸಂಗಮದಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಈವರೆಗೆ 40 ಕೋಟಿಗೂ ಅಧಿಕ ಭಕ್ತರು ಪವಿತ್ರ ಸ್ನಾನ ಮಾಡಿದ್ದಾರೆ ಎಂದು ಉತ್ತರ ಪ್ರದೇಶ ಸರ್ಕಾರ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.