
ಪಿಟಿಐ
ರೈಲು
ಫತೇಗಢ್ ಸಾಹಿಬ್: ಗರೀಬ್ ರಥ ಎಕ್ಸ್‌ಪ್ರೆಸ್ ರೈಲಿನ ಒಂದು ಬೋಗಿಯಲ್ಲಿ ಶನಿವಾರ ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡಿದ್ದು ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ರೈಲ್ವೆ ಪೋಲಿಸರು ತಿಳಿಸಿದ್ದಾರೆ.
ರೈಲು ಅಮೃತಸರದಿಂದ ಸಹಸ್ರಾಗೆ ತೆರಳುತ್ತಿತ್ತು. ಸಿರಹಿಂದ್ ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದೆ ಎಂದು ಅವರು ಹೇಳಿದ್ದಾರೆ.
ಬೆಳಿಗ್ಗೆ 7.30ರ ಸುಮಾರಿಗೆ ಎಸಿ ಬೋಗಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡ ಕೂಡಲೇ ಪ್ರಯಾಣಿಕರನ್ನು ಕೆಳಗೆ ಇಳಿಸಿ ಸ್ಥಳೀಯ ಸಿಬ್ಬಂದಿ ನೆರವಿನೊಂದಿಗೆ ಬೆಂಕಿ ನಂದಿಸಲಾಯಿತು. ಈ ಘಟನೆದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ರೈಲು ಒಂದು ಗಂಟೆ ಬಳಿಕ ಸಹಸ್ರಾ ಕಡೆ ತೆರಳಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.