ADVERTISEMENT

ಕೋಚಿಂಗ್ ಸೆಂಟರ್ ದುರಂತ: ಸಹ ಮಾಲೀಕರ ಜಾಮೀನು ಅರ್ಜಿ ತಿರಸ್ಕರಿಸಿದ ದೆಹಲಿ ಕೋರ್ಟ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 3 ಆಗಸ್ಟ್ 2024, 6:47 IST
Last Updated 3 ಆಗಸ್ಟ್ 2024, 6:47 IST
<div class="paragraphs"><p>'ರಾವ್ಸ್ ಐಎಎಸ್‌ ಸ್ಟಡಿ ಸರ್ಕಲ್‌' ತರಬೇತಿ ಕೇಂದ್ರದ ಎದುರಿನ ರಸ್ತೆಯಲ್ಲಿ ಮಳೆ ನೀರು ನಿಂತಿರುವುದು. ದುರಂತದ ಸಂಭವಿಸಿದ ದಿನ ಭಾರಿ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿತ್ತು.</p></div>

'ರಾವ್ಸ್ ಐಎಎಸ್‌ ಸ್ಟಡಿ ಸರ್ಕಲ್‌' ತರಬೇತಿ ಕೇಂದ್ರದ ಎದುರಿನ ರಸ್ತೆಯಲ್ಲಿ ಮಳೆ ನೀರು ನಿಂತಿರುವುದು. ದುರಂತದ ಸಂಭವಿಸಿದ ದಿನ ಭಾರಿ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿತ್ತು.

   

ಪಿಟಿಐ ಚಿತ್ರ

ನವದೆಹಲಿ: ರಾಷ್ಟ್ರ ರಾಜಧಾನಿಯ ಹಳೆ ರಾಜಿಂದರ್ ನಗರ ಪ್ರದೇಶದ ಕೋಚಿಂಗ್ ಕೇಂದ್ರದ ಸಹ ಮಾಲೀಕರು ಸಲ್ಲಿಸಿದ್ದ ಜಾಮೀನು ಅರ್ಜಿಗಳನ್ನು ಇಲ್ಲಿನ ತೀಸ್‌ ಹಜಾರಿ ನ್ಯಾಯಾಲಯ ಶನಿವಾರ ತಿರಸ್ಕರಿಸಿದೆ.

ADVERTISEMENT

'ರಾವ್ಸ್ ಐಎಎಸ್‌ ಸ್ಟಡಿ ಸರ್ಕಲ್‌' ಕೋಚಿಂಗ್ ಕೇಂದ್ರ ಇದ್ದ ಕಟ್ಟಡದ ನೆಲಮಹಡಿಗೆ ಮಳೆ ನೀರು ನುಗ್ಗಿದ್ದರಿಂದ ಮೂವರು ವಿದ್ಯಾರ್ಥಿಗಳು ಕಳೆದ ವಾರ (ಜುಲೈ 27ರಂದು) ಮೃತಪಟ್ಟಿದ್ದರು. ಪ್ರಕರಣದ ತನಿಖೆಯನ್ನು ಸಿಬಿಐ ಈಗಾಗಲೇ ಆರಂಭಿಸಿರುವ ಹಿನ್ನೆಲೆಯಲ್ಲಿ ಜಾಮೀನು ಅರ್ಜಿಯನ್ನು ವಜಾ ಮಾಡಿದೆ.

ದೆಹಲಿ ಹೈಕೋರ್ಟ್‌ ಈ ಪ್ರಕರಣದ ತನಿಖೆಯನ್ನು ಶುಕ್ರವಾರ ಸಿಬಿಐಗೆ ವಹಿಸಿತ್ತು. 'ತನಿಖೆಯ ಬಗ್ಗೆ ಸಾರ್ವಜನಿಕರಿಗೆ ಯಾವುದೇ ಅನುಮಾನ ಮೂಡಬಾರದು ಎಂಬ ಉದ್ದೇಶದಿಂದ ಸಿಬಿಐಗೆ ಒಪ್ಪಿಸಲಾಗಿದೆ' ಎಂದು ಒತ್ತಿ ಹೇಳಿತ್ತು.

ಕೇರಳದ ಎರ್ನಾಕುಳಂ ಜಿಲ್ಲೆಯ ನವೀನ್‌ ಡೆಲ್ವಿನ್, ತೆಲಂಗಾಣದಲ್ಲಿ ನೆಲೆಸಿರುವ ಬಿಹಾರದ ಔರಂಗಾಬಾದ್‌ನ ತಾನ್ಯಾ ಸೋನಿ ಮತ್ತು ಉತ್ತರ ಪ್ರದೇಶದ ಶ್ರೇಯಾ ಯಾದವ್‌ ಎಂಬವರು ದುರ್ಘಟನೆಯಲ್ಲಿ ಮೃತಪಟ್ಟಿದ್ದರು. ಈ ಮೂವರೂ ನಾಗರಿಕ ಸೇವಾ ಪರೀಕ್ಷೆಗಾಗಿ ಸಿದ್ಧತೆ ನಡೆಸುತ್ತಿದ್ದರು.

ದೆಹಲಿ ವಿಶ್ವವಿದ್ಯಾಲಯದ ಮಹಾರಾಜಾ ಅಗ್ರಸೇನ್‌ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದ ತಾನ್ಯಾ, ಒಂದೂವರೆ ತಿಂಗಳ ಹಿಂದೆ ಹಾಗೂ ಬಿಎಸ್‌ಸಿ (ಕೃಷಿ) ವ್ಯಾಸಂಗ ಮಾಡಿರುವ ಶ್ರೇಯಾ, ಎರಡು ತಿಂಗಳ ಹಿಂದೆಯಷ್ಟೇ ರಾವ್ಸ್ ಕೋಚಿಂಗ್ ಸೆಂಟರ್‌ಗೆ ಸೇರಿಕೊಂಡಿದ್ದರು. 

ಜವಾಹರಲಾಲ್‌ ನೆಹರೂ ವಿಶ್ವವಿದ್ಯಾಲಯದಲ್ಲಿ ಪಿಎಚ್‌.ಡಿ ಮಾಡುತ್ತಿದ್ದ ನವೀನ್‌, ಎಂಟು ತಿಂಗಳಿನಿಂದ ಇಲ್ಲಿ ತರಬೇತಿ ಪಡೆಯುತ್ತಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.