ADVERTISEMENT

ಜೆಇಇ ವಿದ್ಯಾರ್ಥಿಗಳಿಗೆ ₹3 ಕೋಟಿ ವಂಚನೆ: 8 ಅಧಿಕಾರಗಳ ವಿರುದ್ಧ ಪ್ರಕರಣ

ಪಿಟಿಐ
Published 7 ಜನವರಿ 2025, 15:13 IST
Last Updated 7 ಜನವರಿ 2025, 15:13 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಥಾಣೆ: ಜಂಟಿ ಪ್ರವೇಶ ಪರೀಕ್ಷೆಗೆ (ಜೆಇಇ) ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಸುಮಾರು ₹3 ಕೋಟಿಗೂ ಹೆಚ್ಚು ವಂಚನೆ ಮಾಡಿರುವ ಆರೋಪದ ಮೇಲೆ ತರಬೇತಿ ಸಂಸ್ಥೆಯ ಎಂಟು ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂಸ್ಥೆಯ ವಿರುದ್ಧ ಕೆಲವು ವಿದ್ಯಾರ್ಥಿಗಳು ದೂರು ನೀಡಿದ ಬಳಿಕ ಸೋಮವಾರ ಪ್ರಕರಣ ದಾಖಲಿಸಲಾಗಿದೆ ಎಂದು ಥಾಣೆ ನಗರ ಪೊಲೀಸ್‌ ಠಾಣೆಯ ಸಹಾಯಕ ಪೊಲೀಸ್‌ ಇನ್‌ಸ್ಪೆಕ್ಟರ್‌ ಸಂದೀಪ್‌ ಚವಾಣ್‌ ಹೇಳಿದ್ದಾರೆ.

ADVERTISEMENT

2024ರ ಜನವರಿಯಿಂದ ಸಂಸ್ಥೆಯು ಜೆಇಇಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳಿಂದ ₹3.20 ಕೋಟಿ ಸಂಗ್ರಹಿಸಿದ್ದು, ಶುಲ್ಕದ ಹಣವನ್ನು ದುರುಪಯೋಗ ಪಡಿಸಿಕೊಂಡಿದೆ. ಅಲ್ಲದೆ, ತರಬೇತಿ ಸಂಸ್ಥೆಯನ್ನು ಏಕಾಏಕಿ ಮುಚ್ಚಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ತರಬೇತಿ ಸಂಸ್ಥೆಯು ವಿದ್ಯಾರ್ಥಿಗಳಿಂದ ವಿವಿಧ ಬ್ಯಾಂಕ್‌ ಖಾತೆಗಳ ಮೂಲಕ ಶುಲ್ಕವನ್ನು ಸಂಗ್ರಹಿಸಿದೆ. ಶುಲ್ಕ ಮರುಪಾವತಿಸುವಂತೆ ಮತ್ತು ತರಗತಿಗಳನ್ನು ನಿಲ್ಲಿಸಿರುವುದಕ್ಕೆ ಕಾರಣಗಳನ್ನು ಕೇಳಿದಾಗ ವಿದ್ಯಾರ್ಥಿಗಳಿಗೆ ಬೆದರಿಕೆ ಹಾಕಲಾಗಿದೆ ಎಂದು ಚವಾಣ್‌ ಹೇಳಿದ್ದಾರೆ.

ಇಲ್ಲಿಯವರೆಗೆ ಸುಮಾರು 80 ವಿದ್ಯಾರ್ಥಿಗಳನ್ನು ಗುರುತಿಸಲಾಗಿದೆ. ಆದರೆ, ಅವರ ಸಂಖ್ಯೆ ಇನ್ನೂ ಹೆಚ್ಚಿರಬಹುದು. ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.